ಮಂಗಳೂರು

ಬಂಟ್ವಾಳ: ಬೀಳ್ಕೊಡುಗೆ ಹಾಗೂ ಸಮ್ಮಾನ ಕಾರ್ಯಕ್ರಮ

ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು  ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಮುಖ್ಯ ಕಾರ್ಯನಿರ್ವಹಣಾಕಾರಿಯಾಗಿ ನಿವೃತ್ತಿ ಹೊಂದಿದ ಎ. ಮಂಜಪ್ಪ ಮೂಲ್ಯ ಹಾಗೂ ನಿವೃತ್ತ ಶಾಖಾ ವ್ಯವಸ್ಥಾಪಕಿ ನಳಿನಿ ಪ್ರಭು ಅವರಿಗೆ ಬೀಳ್ಕೊಡುಗೆ ಹಾಗೂ ಸಮ್ಮಾನ ಕಾರ್ಯಕ್ರಮ ಫೆ.೨೫ರಂದು   ಸಂಘದ ಸುವಿಧಾ ಸಭಾ ಭವನದಲ್ಲಿ ನಡೆಯಿತು.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಅವರು ನಿವೃತ್ತರನ್ನು ಸಮ್ಮಾನಿಸಿ ಮಾತನಾಡಿ, ಮಂಜಪ್ಪ ಮೂಲ್ಯ ಅವರು ತಮ್ಮ ಸೇವಾವಧಿಯಲ್ಲಿ ಆದರ್ಶ ಮುಖ್ಯ ಕಾರ್ಯಾವಿರ್ವಹಣಾಕಾರಿಯಾಗಿ ಸಹಕಾರಿ ಕ್ಷೇತ್ರದಲ್ಲಿ ಮೆಚ್ಚುಗೆಗೆ ಪಾತ್ರರಾದವರು. ನಿವೃತ್ತರಿಬ್ಬರೂ ಸೇವೆಯೇ ಅತ್ಯಂತ ಪರಮ ಧರ್ಮವೆಂದು ಬಗೆದು ಸಹಕಾರಿ ಧರ್ಮವನ್ನು ಪ್ರಾಮಾಣಿಕವಾಗಿ ಪರಿಪಾಲನೆ ಮಾಡಿ ಜಿಲ್ಲೆಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು, ತಮ್ಮ ಸೇವಾವಧಿಯಲ್ಲಿ ಕರ್ತವ್ಯ ದಕ್ಷತೆ, ಬದ್ಧತೆ ಮತ್ತು ಪ್ರಾಮಾಣಿಕತೆಗೆ ಹೆಸರಾದವರು ಮಂಜಪ್ಪ ಮೂಲ್ಯ. ಆಡಳಿತ ಮಂಡಳಿ ಸಿಬಂದಿವರ್ಗದ ಮಧ್ಯೆ ಬಾಂಧವ್ಯದ ಕೊಂಡಿಯಾಗಿರುವ   ಅವರು ಗ್ರಾಮೀಣ ಪ್ರದೇಶದ ಬಡವರ ಸ್ವಾವಲಂಬಿ ಬದುಕಿಗೆ ಪ್ರೇರಕರಾದವರು ಎಂದರು.

ಸಂಘದ ಅಧ್ಯಕ್ಷ ಕೆ.ಲಕ್ಷ್ಮೀ ನಾರಾಯಣ ಉಡುಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಉನ್ನತ ಹುದ್ದೆಯಲ್ಲಿದ್ದರೂ ಸಾಮಾನ್ಯ ಜನರೊಂದಿಗೆ ಸಾಮಾನ್ಯರಾಗಿ, ಸರಳ ಸಜ್ಜನಿಕೆಯ ಸ್ನೇಹ ಜೀವಿಯಾಗಿರುವ ಮಂಜಪ್ಪ ಮೂಲ್ಯ ಅವರು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರದಲ್ಲೂ ಗಮನಾರ್ಹ ಸೇವೆ ಸಲ್ಲಿಸಿದವರು. ನಳಿನಿಪ್ರಭು ಅವರ ಸೇವೆಯೂ ಗಮನಾರ್ಹವಾದುದು. ಇಬ್ಬರ ಸೇವೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಪ್ರಗತಿಪರ ಕೃಷಿಕ ಉದಯ ಕುಮಾರ್ ಕಟ್ಟೆಮನೆ, ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರ್ಷ ಸಂಪಿಗೆತ್ತಾಯ, ಎಸ್‌ಸಿಡಿಸಿಸಿ ಬ್ಯಾಂಕ್ ಮಡಂತ್ಯಾರು ಶಾಖಾ ವ್ಯವಸ್ಥಾಪಕಿ ಸೌಮ್ಯಾ, ಪಿಲಾತಬೆಟ್ಟು  ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಇರ್ವತ್ತೂರು ಗ್ರಾ.ಪಂ.ಅಧ್ಯಕ್ಷ ಎಂ.ಪಿ.ಶೇಖರ್, ತಾ.ಪಂ.ಮಾಜಿ ಸದಸ್ಯ ರಮೇಶ್ ಪೂಜಾರಿ ಕುಡ್ಮೇರು, ಸಂಘದ ಉಪಾಧ್ಯಕ್ಷ ಉಮೇಶ ಪೂಜಾರಿ ತಿಮರಡ್ಡ, ನಿರ್ದೇಶಕರಾದ ಸುಂದರ ನಾಯ್ಕ, ಬೂಬ ಸಪಲ್ಯ,ನಾರಾಯಣ ಪೂಜಾರಿ, ಸಂತೋಷ ಕುಮಾರ್ ಶೆಟ್ಟಿ, ದಿನೇಶ್ ಮೂಲ್ಯ,  ಸೀತಾರಾಮ ಶೆಟ್ಟಿ,ಚಂದ್ರಶೇಖರ ಹೆಗ್ಡೆ,ಶಿವಯ್ಯ,ಸಿಬಂದಿ ವರ್ಗ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್ ಬಂಟ್ವಾಳ ವಲಯ ಮೇಲ್ವಿಚಾರಕ ಎಚ್.ಕೇಶವ ಕಿಣಿ ಅವರನ್ನು ಸಮ್ಮಾನಿಸಲಾಯಿತು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಕಾರಿ ಬಬಿತಾ ಡಿ. ಸ್ವಾಗತಿಸಿದರು. ಪಿ.ಎಂ.ಪ್ರಭಾಕರ,ದೀಕ್ಷಿತ್ ಚೌಟ ಸಮ್ಮಾನ ಪತ್ರ ವಾಚಿಸಿದರು. ಜಯರಾಮ ನಾಯ್ಕ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

Ashika S

Recent Posts

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

16 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

11 hours ago