Categories: ಮಂಗಳೂರು

ಬಂಟ್ವಾಳ : ಮಾಜಿ ಸಂಸದ ಆರ್. ಧ್ರುವನಾರಾಯಣ್ ಅಗಲಿಕೆಗೆ ಸಂತಾಪ ಸೂಚಿಸಿದ ಕಾಂಗ್ರೆಸ್

ಬಂಟ್ವಾಳ : ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಹಠಾತ್ ಅಗಲಿಕೆಗೆ ಬಂಟ್ವಾಳ ಕಾಂಗ್ರೆಸ್ ತೀವ್ರ ಸಂತಾಪ ಸೂಚಿಸಿದೆ.

ನಿಧನದ ಶೋಕಾರ್ಥ ಶನಿವಾರ ಮುಂದುವರಿಯಬೇಕಾಗಿದ್ದ “ಬಂಟ್ವಾಳ ಪ್ರಜಾಧ್ವನಿ ಯಾತ್ರೆ”ಯನ್ನು ಒಂದು‌ ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದ್ದು, ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಬ್ರಹ್ಮರಕೊಟ್ಟು ಭಜನಾ ಮಂದಿರಲ್ಲಿ ಧ್ರುವನಾರಾಯಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷ ಪ್ರಮುಖರಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪದ್ಮನಾಭ ರೈ, ಸಂಪತ್ ಕುಮಾರ್ ಶೆಟ್ಟಿ, ಶಬೀರ್ ಸಿದ್ದಕಟ್ಟೆ, ಲೋಲಾಕ್ಷ ಶೆಟ್ಟಿ, ದೇವಿಪ್ರಸಾದ್ ಪೂಂಜಾ, ಸ್ಟೀವನ್ ಡಿ’ಸೋಜ, ಆಲ್ಬರ್ಟ್ ಮೆನೆಜಸ್, ವೆಂಕಪ್ಪ ಪೂಜಾರಿ, ಜಗದೀಶ ಕೊಯಿಲ ಮೊದಲಾದವರು ಭಾಗವಹಿಸಿದ್ದರು.

ಧ್ರುವನಾರಾಯಣ ನಿಧನದ ಪ್ರಯುಕ್ತ ಶನಿವಾರ ದಿನದ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಸ್ಥಗಿತಗೊಳಿಸಲಾಗಿದ್ದು, ಭಾನುವಾರದ ಯಾತ್ರಾ ಕಾರ್ಯಕ್ರಮ ಯಥಾಪ್ರಕಾರ ನಿಗದಿಯಂತೆ ನಡೆಯಲಿದೆ. ಶನಿವಾರದ ಯಾತ್ರಾ ಕಾರ್ಯಕ್ರಮ ಕೊನೆಯಲ್ಲಿ ಅಂದರೆ ಮಾ .24 ರಂದು ನಡೆಸಲಾಗುವುದು ಎಂದು ಯಾತ್ರಾ ಸಂಚಾಲಕ ಪಿಯೂಸ್ ಎಲ್ ರೋಡ್ರಿಗಸ್ ತಿಳಿಸಿದ್ದಾರೆ.

Ashika S

Recent Posts

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

11 mins ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

20 mins ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

45 mins ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

57 mins ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

1 hour ago

ಕರೆಂಟ್ ಕಟ್‌ನಿಂದಾಗಿ ಜನರ ಜೀವನ ಕತ್ತಲು: ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.…

2 hours ago