News Karnataka Kannada
Thursday, May 09 2024
ಮಂಗಳೂರು

ಬಂಟ್ವಾಳ: ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ

Bantwal: Free eye treatment service camp
Photo Credit : By Author

ಬಂಟ್ವಾಳ: ರೋಟರಿ ಕ್ಲಬ್ ಪುತ್ತೂರು ಸಿಟಿ, ಇಡ್ಕಿದು ಸೇವಾ ಸಹಕಾರಿ ಸಂಘ ನಿ., ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ ಮಂಗಳೂರು ಹಾಗೂ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಉರಿಮಜಲಿನಲ್ಲಿರುವ ಇಡ್ಕಿದು ಸೇವಾಸಹಕಾರಿ ಸಂಘದ ಶತಾಮೃತದ ಆವರಣದಲ್ಲಿ ಸೆ.೧೬ರಂದು ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಡಾ. ಗೌರಿ ಪೈರವರು ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಇಡ್ಕಿದು ಸೇವಾ‌ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ‌ ಶೆಟ್ಟಿ ಬೀಡಿನಮಜಲುರವರು ಪ್ರಾಸ್ತಾವಿಕವಾಗಿ ಮಾತನಾಡಿ ಸುಮಾರು ೧೦೦ವರುಷಗಳ ಇತಿಹಾಸವಿರುವ ನಮ್ಮ ಇಡ್ಕಿದು ಸೇವಾ ಸಹಕಾರಿ ಸಂಘವು ಜನರ ಆಶೋತ್ತರಗಳಿಗೆ ಸದಾ ಸ್ಪಂದಿವುದರ ಜೊತೆಗೆ ಹಲವಾರು ಸಾಮಾಜಿಕ ಕಳಕಳಿಯು ಕೆಲಸಗಳನ್ನು‌ ಮಾಡುತ್ತಾ ಬಂದಿದೆ. ನಮ್ಮ ಸಂಘದ ಶತಮಾನೋತ್ಸವದ ಅಂಗವಾಗಿ ಇದೀಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಲ್ಲಿ ಆರೋಗ್ಯಾಮೃತ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಹಲವಾರು ಜನರು ಇದೀಗಾಗಲೇ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ನನ್ನ ಮಾತೃ ಸಂಸ್ಥೆಯಾದ ರೋಟರಿ ಸಿಟಿಯ ಸಹಭಾಗಿತ್ವದಲ್ಲಿ ಇಂದಿಲ್ಲಿ ಉಚಿತ ನೇತ್ರ ತಪಾಸಣೆಯನ್ನು ಆಯೋಜನೆ ಮಾಡಿರುವುದು ತುಂಬಾ ಸಂತಸ ತಂದಿದೆ. ಈ ಇಡ್ಕಿದು ಸೇವಾ ಸಹಕಾರಿ ಸಂಘವು ಕುಳ ಹಾಗೂ ಇಡ್ಕಿದು ಗ್ರಾಮದ ವ್ಯಾಪ್ತಿಯನ್ನು ಹೊಂದಿದ್ದು ನಮ್ಮ ಸದಸ್ಯರ ಆರೋಗ್ಯದ ಹಿತದೃಷ್ಠಿಯಿಂದ ಮಾಡಿದ ಈ ಒಂದು ಶಿಬಿರಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರಕಿದೆ. ಈ ಒಂದು ಶಿಬಿರದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು ಎಂದರು.

ರೋಟರಿ ಕ್ಲಬ್ ಪುತ್ತೂರು ಸಿಟಿಯ ಅಧ್ಯಕ್ಷ ಪ್ರಶಾಂತ್ ಶೆಣೈ‌ ಸ್ವಾಗತಿಸಿ ಮಾತನಾಡಿ, ರೋಟರಿಯು ಆರೋಗ್ಯ ಸಿರಿ ಯೋಜನೆಯಡಿಯಲ್ಲಿ ಹಲವಾರು ಯಶಸ್ವಿ ಕಾರ್ಯಕ್ರಮಗಳನ್ನು ನೀಡಲಾಗಿದೆ ಎಂದ ಅವರು ಇಂದಿನ ಈ ಕಾರ್ಯಕ್ರಮದ ಆಯೋಜನೆಗೆ ಸಹಕರಿಸಿದ ರೋಟರಿಯ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಹಾಗೂ ರೋಟರಿ ಜಿಲ್ಲೆ ೩೧೮೧ ಇದರ ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಆಚಾರ್ಯರವರಿಗೆ ಅಭಿನಂದನೆ ಸಲ್ಲಿಸಿದರು.

ಕಣ್ಣಿನ ಬಗ್ಗೆ ಡಾ.ಶಾಂತರಾಮ್ ರವರು ಮಾಹಿತಿ ನೀಡಿದರು. ರೋಟರಿ ಕ್ಲಬ್ ಪುತ್ತೂರು ಸಿಟಿಯ ಕಾರ್ಯದರ್ಶಿ ಜಯಗುರು ಆಚಾರ್, ಝೋನಲ್ ಲೆಫ್ಟಿನೆಂಟ್ ಪ್ರಮೋದ್ ಮಲ್ಲಾರ, ಇಡ್ಕಿದು ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಡಾ. ಗೌರಿ ಪೈರವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಸಿಬ್ಬಂದಿ ರತ್ನಾವತಿ ಪ್ರಾರ್ಥಿಸಿದರು. ರೋಟರಿ ಸಿಟಿಯ ಸದಸ್ಯರು, ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಇಡ್ಕಿದು ಸೇವಾ ಸಹಕಾರಿ ಸಂಘದ ನಿರ್ದೇಶಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ಇವರ ವತಿಯಿಂದ ಅರ್ಹರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಯಿತು. ಗ್ರಾಮೀಣ ಪ್ರದೇಶದಲ್ಲಿ ಆಯೋಜನೆ ಮಾಡಿರುವ ಈ ಶಿಬಿರದಲ್ಲಿ ಸೇರಿರುವ ಜನಸಂದಣಿ ಹಾಗೂ ಕಾರ್ಯಕ್ರಮದ ಅಚ್ಚುಕಟ್ಟಿನ ವ್ಯವಸ್ಥೆ ಕಂಡ ವೈದ್ಯರುಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಶಿಬಿರದಲ್ಲಿ ಇಡ್ಕಿದು‌ ಶತಾಮೃತ ಕಟ್ಟಡದಲ್ಲಿರುವ ಮಾಣಿ ಸಮುದಾಯ ಆರೋಗ್ಯ ಕೇಂದ್ರದ ಉಪಕೇಂದ್ರದಲ್ಲಿ ಶಿಬಿರಾರ್ಥಿಗಳ ಉಚಿತ ಆರೋಗ್ಯ‌ ತಪಾಸಣೆ ನಡೆಸಲಾಯಿತು. ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ ಹಾಗೂ ಮಂಗಳೂರಿನ ಖ್ಯಾತ ಜಿಲ್ಲಾ ಆಸ್ಪತ್ರೆ (Wenlock) ಇದರ ಸಹಯೋಗದಲ್ಲಿ ಕೆ.ಎಂ.ಸಿ.ಯ ಪ್ರಸಿದ್ಧ ನೇತ್ರ ತಜ್ಞರು ಭಾಗವಹಿಸಿದ್ದರು.

ಸಂಸ್ಥೆಯ ಸಿಬ್ಬಂದಿ ಈಶ್ವರ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಇಡ್ಕಿದು ಸೇವಾ ಸಹಕಾರಿ ಸಂಘದ ಅದ್ಯಕ್ಷ ರಾದ ಸುಧಾಕರ ಶೆಟ್ಟಿ ಬೀಡಿನಮಜಲುರವರು ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು