News Karnataka Kannada
Friday, May 03 2024
ಮಂಗಳೂರು

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ನಿಧನ

Untitled 1 Recovered
Photo Credit :
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.‌ ಇಲ್ಲಿನ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ.
ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು.‌ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು,ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾಳೆ.
ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.ಆರಾಧ್ಯ ಆಚಾರ್ಯ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಬಾಲಕಿಯ  ಸಾವಿಗೆ ಶಾಲೆಯ ಆಡಳಿತಮಂಡಳಿ, ಶಿಕ್ಷಕ ವೃಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಗೌರವಾರ್ಥ ಶಾಲೆಗೆ ಗುರುವಾರ ರಜೆ ಸಾರಲಾಗಿತ್ತು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು