ಮಂಗಳೂರು

ಬಂಟ್ವಾಳ: ಅನಂತಾಡಿ ಗ್ರಾ.ಪಂ.ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ- ಶಿಲಾನ್ಯಾಸ

ಬಂಟ್ವಾಳ: ಅನಂತಾಡಿ ಗ್ರಾ.ಪಂ.ಬಿಜೆಪಿಯ ಬಲಿಷ್ಠ ಶಕ್ತಿಕೇಂದ್ರವಾಗಿದ್ದು, ಅದಕ್ಕೆ ಪೂರಕವಾಗಿ ಹೆಚ್ಚಿನ ಅನುದಾನಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. ಜತೆಗೆ ಕೋಟ್ಯಂತರ ರೂಪಾಯಿ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಬಂದಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಅವರು ಅನಂತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು ೧.೫೦ ಕೋ.ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ- ಶಿಲಾನ್ಯಾಸ ನೆರವೇರಿಸಿ ಬಳಿಕ ಮಂದಿರದಲ್ಲಿ ನಡೆದ ಮಾತನಾಡಿದರು. ಯಾವುದೇ ಚುನಾವಣೆಯನ್ನು ಅತಿಯಾದ ಆತ್ಮವಿಶ್ವಾಸದಿಂದ ಕೊಂಚ ಲೈಟಾಗಿ ಪರಿಗಣಿಸಿದರೂ, ದೊಡ್ಡ ಹೊಡೆತ ಸಿಗುತ್ತದೆ. ಅಭಿವೃದ್ಧಿಯ ಜತೆಗೆ ಪಕ್ಷ ಸಂಘಟನೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ಅಭ್ಯರ್ಥಿ ಸೋತಾಗ ಎಷ್ಟು ಹಿನ್ನಡೆಯಾಗುತ್ತದೆ ವಿಮರ್ಶೆ ಮಾಡಬೇಕು.

ವೇದಿಕೆಯಲ್ಲಿ ಅನಂತಾಡಿ ಗ್ರಾ.ಪಂ.ಅಧ್ಯಕ್ಷ ಗಣೇಶ್ ಪೂಜಾರಿ, ನೆಟ್ಲಮುಡ್ನೂರು ಗ್ರಾ.ಪಂ‌.ಅಧ್ಯಕ್ಷ ಸತೀಶ್ ಪೂಜಾರಿ, ಉಪಾಧ್ಯಕ್ಷೆ ಶಕೀಲ ಕೃಷ್ಣ ಪೂಜಾರಿ, ಸದಸ್ಯೆ ಸುಜಾತ, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷೆ ಪುಷ್ಪರಾಜ್ ಚೌಟ, ಉಪಾಧ್ಯಕ್ಷ ತನಿಯಪ್ಪ ಗೌಡ, ಮಹಾಶಕ್ತಿ ಕೇಂದ್ರದ ಅಧ್ಯಕ್ಷೆ ಸನತ್ ಕುಮಾರ್ ರೈ, ತಾ.ಪಂ.ಮಾಜಿ ಸದಸ್ಯೆ ಗೀತಾ ಚಂದ್ರಶೇಖರ, ಅನಂತಾಡಿ ಗ್ರಾ.ಪಂ.ಸದಸ್ಯರಾದ ಸಂಧ್ಯಾ, ರಶ್ಮೀ, ಮೊದಲಾದವರು ಉಪಸ್ಥಿತರಿದ್ದರು.

ನಾಗೇಶ್ ಭಂಡಾರಿ ಕರಿಂಕ ಸ್ವಾಗತಿಸಿದರು. ದಿನೇಶ್ ಅನಂತಾಡಿ ವಂದಿಸಿದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago