News Karnataka Kannada
Friday, May 03 2024
ಮಂಗಳೂರು

ಬಂಟ್ವಾಳ: ಕಂಬಳ ಹಾಗೂ ಯಕ್ಷಗಾನವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ- ಯು.ಟಿ.ಖಾದರ್

Bantwal: Kambala and Yakshagana are the eyes of folk field in our district: U.T. Khader
Photo Credit : News Kannada

ಬಂಟ್ವಾಳ: ಕಂಬಳ ಹಾಗೂ ಯಕ್ಷಗಾನ ನಮ್ಮ ಜಿಲ್ಲೆಯ ಜಾನಪದ ಕ್ಷೇತ್ರದ ಕಣ್ಣುಗಳು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ವಿಧಾನಸಭೆಯ ವಿರೋದ ಪಕ್ಷದ ಉಪನಾಯಕ ಯು.ಟಿ.ಖಾದರ್ ಹೇಳಿದರು.

ಮಾಜಿ ಸಚಿವ ಬಿ. ರಮನಾಥ ರೈ ಗೌರವಾಧ್ಯಕ್ಷತೆಯಲ್ಲಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್.ರೋಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲುವಿಲ್ಲಿ ಬಂಟ್ವಾಳ ಕಂಬಳ ಹೆಸರಿನಲ್ಲಿ ನಡೆಯುತ್ತಿರುವ 12ನೇ ವರ್ಷದ ಮೂಡೂರು ಪಡೂರು ಜೊಡುಕರೆ ಬಯಲು ಕಂಬಳದ ಪ್ರಯುಕ್ಯ ಶನಿವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮೂಡೂರು ಪಡೂರು ಕಂಬಳ ಆಯೋಜಿಸುವ ಮೂಲಕ ತುಳುನಾಡಿನ ಕಂಬಳ ಸಂಸ್ಕೃತಿಯನ್ನು ಯುವಕರಿಗೆ ಪರಿಚಯಿಸುವ ಕಾರ್ಯ ಬಿ. ರಮನಾಥ ರೈ ಅವರಿಂದ ಆಗುತ್ತಿದೆ, ಕಂಬಳ ಕ್ರೀಡೆಯನ್ನು ನಿಲ್ಲಿಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದಾಗ ಅಂದು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ. ರಮಾನಾಥ ರೈ ಹಾಗೂ ಶಾಸಕರು ಸರ್ಕಾರದ ಮೂಲಕ ನ್ಯಾಯಲಯಕ್ಕೆ ಮನವರಿಕೆ ಮಾಡಿ ಕಂಬಳ ಪುನಾರಂಭಗೊಳ್ಳಲು ಕಾರಣೀಕರ್ತರಾಗಿದ್ದಾರೆ ಎಂದು ತಿಳಿಸಿದರು.

ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ಅಲ್ಲಿಪಾದೆ ಸಂತ ಅಂಥೋನಿ ಚರ್ಚ್ ಧರ್ಮಗುರು ವಂದನೀಯ ಫೆಡ್ರಿಕ್ ಮೊಂತೆರೋ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ವಸಂತ ಬಂಗೇರ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಕೆಪಿಸಿಸಿ ಸದಸ್ಯ ಪೃಥ್ವಿರಾಜ್ ಆರ್.ಕೆ. ಪ್ರಮುಖರಾದ ರೋಹಿತ್ ಶೆಟ್ಟಿ ನಗ್ರಿಗುತ್ತು, ಶಾಲೆಟ್ ಪಿಂಟೋ, ರವಿಶಂಕರ್ ಶೆಟ್ಟಿ ಬಡಾಜೆಗುತ್ತು, ಶೇಖರ್ ಕುಕ್ಕೇಡಿ, ವೆಂಕಪ್ಪ ಕಾಜವ, ಪ್ರಶಾಂತ್ ಕಾಜವ, ಪದ್ಮನಾಭ ಕೋಟ್ಯಾನ್, ಅಶೋಕ್ ಕುಮಾರ್ ರೈ, ಪದ್ಮರಾಜ್ ಆರ್., ಮಹಮ್ಮದ್ ಬಡಗನ್ನೂರು, ಉಮಾನಾಥ ಶೆಟ್ಟಿ, ಧರಣೇಂದ್ರ ಕುಮಾರ್, ಪ್ರತಿಭಾ ಕುಳಾಯಿ, ಪುತ್ತೂರು ಯುವ ಕಾಂಗ್ರೇಸ್ ಅಧ್ಯಕ್ಷ ಶ್ರೀಪ್ರಸಾದ್ , ರಚನಾ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕ ಲಿಯೋ ಫೆರ್ನಾಂಡಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಂಬಳ ಸಮಿತಿ ಸಂಚಾಲಕ ಪದ್ಮಶೇಖರ್ ಜೈನ್, ಕಾರ್ಯಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಪಿಲಿಫ್ ಫ್ರೆಂಕ್, ಉಪಾಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಸುದರ್ಶನ ಜೈನ್, ಬೇಬಿ ಕುಂದರ್, ಸುದೀಪ್ ಕುಮಾರ್, ಎಂ.ಎಸ್. ಮಹಮ್ಮದ್, ಚಿತ್ತ ರಂಜನ್ ಶೆಟ್ಟಿ,ವೆಂಕಪ್ಪ ಪೂಜಾರಿ ಬಂಟ್ವಾಳ, ಅಬ್ಬಾಸ್ ಆಲಿ ಮತ್ತಿತರರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಕಂಬಳ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು.

ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಸ್ವಾಗತಿಸಿದರು, ಮಾಣಿ ಗ್ರಾ. ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು