Categories: ಮಂಗಳೂರು

ಕರ್ಣಾಟಕ ಬ್ಯಾಂಕ್ ಡಿಜಿಟಲೀಕರಣ ಮತ್ತು ಆತ್ಮನಿರ್ಭರ ಭಾರತಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ

ಬಂಟ್ವಾಳ: ದೇಶದ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಕಳೆದ ೧೦೦ ವರ್ಷಗಳಿಂದ ಗುಣಮಟ್ಟದ ಸೇವೆ ಜೊತೆಗೆ ಗ್ರಾಮೀಣ ಜನತೆಗೆ ಮಾನವೀಯ ಸಂಬಂದಿಸಿದ ಲಾಭದಾಯಕವಾಗಿ ಕಾರ್ಯನಿರ್ವಹಿಸುತ್ತಿರುವ ಕರ್ಣಾಟಕ ಬ್ಯಾಂಕ್ ಡಿಜಿಟಲೀಕರಣ ಮತ್ತು ಆತ್ಮನಿರ್ಭರ ಭಾರತಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಬ್ಯಾಂಕಿನ ಮಾನವ ಸಂಪನ್ಮೂಲ ವಿಭಾಗದ ಮಹಾ ಪ್ರಬಂಧಕ ಜಯ ನಾಗರಾಜ ರಾವ್ ಹೇಳಿದ್ದಾರೆ.

ಇಲ್ಲಿನ ವಾಮದಪದವಿನಲ್ಲಿ ಸೋಮವಾರ ಶುಭಾರಂಭಗೊಂಡ ಕರ್ಣಾಟಕ ಬ್ಯಾಂಕಿನ ೯೦೭ನೇ ಪಿಲಿಮೊಗರು ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ ನೂತನ ಶಾಖೆ ಉದ್ಘಾಟಿಸಿ ಮಾತನಾಡಿ, ವಾಮದಪದವು ಪರಿಸರದಲ್ಲಿ ಹಲವಾರು ಸಹಕಾರಿ ಸಂಘ ಮತ್ತು ಎರಡು ರಾಷ್ಟ್ರೀಕೃತ ಬ್ಯಾಂಕ್ ಕಾರ್ಯ ನಿರ್ವಹಿಸುವ ಮೂಲಕ ಅಭಿವೃದ್ಧಿಯ ಕಡೆಗೆ ಸಾಗುತ್ತಿದೆ ಎಂದರು. ಸ್ಥಳೀಯ ವೈದ್ಯ ಡಾ. ರವಿ ಎನ್.ಶರ್ಮಾ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕ್ ಸಿಬ್ಬಂದಿಗಳು ಜನಸ್ನೇಹಿಯಾಗಿ ಗ್ರಾಹಕರ ಮನಸ್ಸು ಗೆಲ್ಲಬೇಕು ಎಂದರು.

ಇದೇ ವೇಳೆ ಕಟ್ಟಡ ಮಾಲೀಕ ನೋಣಯ್ಯ ಬಂಗೇರ ಭವಾನಿ ದಂಪತಿಯನ್ನು ಸನ್ಮಾನಿಸಲಾಯಿತು.ಮಂಗಳೂರು ಪ್ರಾದೇಶಿಕ ಸಹಾಯಕ ಪ್ರಬಂಧಕ ಡ್ಯಾನಿಶ್ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು. ಶಾಖಾಧಿಕಾರಿ ಹರಿಕೃಷ್ಣ ನಾಯ್ಕ್ ವಂದಿಸಿದರು. ಆಶಾ ಜಿ. ಕಾರ್ಯಕ್ರಮ ನಿರೂಪಿಸಿದರು.

Ashika S

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

6 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

29 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

56 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago