Categories: ಮಂಗಳೂರು

ಬಂಟ್ವಾಳ: ತಾಲೂಕು ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಬಂಟ್ವಾಳ: ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಭಾನುವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯನ್ನು ಆಚರಿಸಲಾಯಿತು.

ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅವರು ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಿತ್ತೂರು ರಾಣಿ ಚೆನ್ನಮ್ಮ ಎಳೆ ವಯಸ್ಸಿನಲ್ಲೇ ಕುದುರೆ ಸವಾರಿ,ಕತ್ತಿವರಸೆ, ಮತ್ತು ಬಿಲ್ಲುಗಾರಿಕೆಯಲ್ಲಿ ತರಬೇತಿ ಪಡೆದಿದ್ದರು. ಬ್ರಿಟಿಷರು ಅಪಾರ ಸೈನ್ಯದೊಂದಿಗೆ ಮುತ್ತಿಗೆ ಹಾಕಿ ಕಿತ್ತೂರಿನ ಮೇಲೆ ದಾಳಿ ಮಾಡಿದಾಗ ದಿಟ್ಟತನದಿಂದ ಅವರನ್ನು ಎದುರಿಸಿ ತಮ್ಮ ಶೌರ್ಯ ಮೆರೆದರು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ತಾಲೂಕು ಚುನಾವಣೆ ಶಾಖೆಯ ಪ್ರಥಮ ದರ್ಜೆ ಸಹಾಯಕ ನಾರಾಯಣ ಗೌಡ ಸ್ವಾಗತಿಸಿ ವಂದಿಸಿದರು.

Gayathri SG

Recent Posts

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

14 mins ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

49 mins ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

1 hour ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

1 hour ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

1 hour ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

2 hours ago