News Karnataka Kannada
Saturday, April 27 2024
ಮಂಗಳೂರು

ಬಂಟ್ವಾಳ: ಫರಂಗಿಪೇಟೆಯಲ್ಲಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಂದ ಪರಿಶೀಲನೆ

KSRTC officials inspect Farangipet
Photo Credit : By Author

ಬಂಟ್ವಾಳ: ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಹಾಗೂ ಇತರ ಸಮಸ್ಯೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ಬಗ್ಗೆ ಪುದು ಗ್ರಾಮ ಪಂಚಾಯತ್ ವತಿಯಿಂದ ಮನವಿ ನೀಡಿದ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪುದು ಗ್ರಾಮದ ಫರಂಗಿಪೇಟೆಯಲ್ಲಿ ಬೆಳಗ್ಗಿನ ಸಮಯ ಕೆ ಎಸ್ ಆರ್ ಟಿ ಸಿ ಬಸ್ ಗಳು ನಿಲುಗಡೆಯಾಗದೆ ಸಂಚರಿಸುವುದು, ಕೆಲವು ಬಸ್ ಗಳು ಜನರಿಂದ ತುಂಬಿ ಬರುವುದರಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ನೇತೃತ್ವದಲ್ಲಿ ಗುರುವಾರ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಲಾಗಿತ್ತು.‌

ಅಲ್ಲದೆ ಗ್ರಾಪಂ ನಿಯೋಗ ಶಾಸಕ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಅವರು ಕೂಡಾ ಕೆ ಎಸ್ ಆರ್ ಟಿ ಸಿ ವಿಭಾಗಿಯಾ ನಿಯಂತ್ರಣಾ ಅಧಿಕಾರಿ ರಾಜೇಶ್ ಶೆಟ್ಟಿ ಅವರೊಂದಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಫರಂಗಿಪೇಟೆಗೆ ಭೇಟಿ ನೀಡಿದ ಕೆ ಎಸ್ ಆರ್ ಟಿ ಸಿ ವಿಭಾಗಿಯ ಅಧಿಕಾರಿ ಮರಿಸ್ವಾಮಿ,ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಸಿದರು. ಪುತ್ತೂರು,ವಿಟ್ಲ,ಧರ್ಮಸ್ಥಳ ಕಡೆಗಳಿಂದ ಬರುವ ಬಸ್ ಗಳು ಫರಂಗಿಪೇಟೆ ತಲುವಾಗ ಜನರಿಂದ‌ ತುಂಬಿರುತ್ತದೆ. ಹೀಗಾಗಿ ಈ ಭಾಗದ ಪ್ರಯಾಣಿಕರಿಗೆ ಬಸ್ ಹತ್ತಲು ಸಾಧ್ಯವಾದ ಸಮಸ್ಯೆ ಬಗ್ಗೆ ಗಮನಕ್ಕೆ ಬಂದಿದ್ದು ಸೋಮವಾರದಿಂದ ಬೆಳಗ್ಗಿನ ಸಮಯ ಎರಡು ಬಸ್ ಗಳು ಫರಂಗಿಪೇಟೆಯಿಂದಲೇ ಸಂಚರಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆ ಎಸ್ ಆರ್ ಟಿ ಸಿ ಸಿಬ್ಬಂದಿ,ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು