Categories: ಮಂಗಳೂರು

ಬಂಟ್ವಾಳ: ಒತ್ತಾಯದಿಂದ ಭಾಷೆ ಉಳಿಸಲು ಸಾಧ್ಯವಿಲ್ಲ- ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಒತ್ತಾಯದಿಂದ ಭಾಷೆ ಉಳಿಸಲು ಸಾಧ್ಯವಿಲ್ಲ, ಅದರ ಮೇಲೆ ಪ್ರೀತಿ ಇದ್ದಾಗ ಭಾಷೆ ಅಭಿವೃದ್ಧಿಗೊಳ್ಳುತ್ತದೆ, ಉಳಿಯುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಬಂಟ್ವಾಳ ಆಡಳಿತ ಸೌಧದಲ್ಲಿ ಮಂಗಳವಾರ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಕ್ಷಿಣ ಕನ್ನಡದಲ್ಲಿ ತುಳು, ಕೊಂಕಣಿ, ಬ್ಯಾರಿ ಮಾತೃಭಾಷೆಯವರು ಅಧಿಕವಿದ್ದರೂ ಕನ್ನಡದ ಮೇಲೆ ಅಭಿಮಾನವಿರುವ ಕಾರಣ, ಸ್ಪಷ್ಟವಾಗಿ ಮಾತನಾಡುವ ಮೂಲಕ ಕನ್ನಡ ಭಾಷೆಯನ್ನು ಬೆಳೆಸುವ ಕಾರ್ಯ ಮಾಡುತ್ತಿದ್ದೇವೆ ಎಂದರು.

ತಹಸೀಲ್ದಾರ್ ಡಾ. ಸ್ಮಿತಾ ರಾಮು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕರ್ನಾಟಕವು ಕಲೆ, ಶಿಲ್ಪದ ಬೀಡಾಗಿದ್ದು, ಹಲವರ ಪರಿಶ್ರಮದಿಂದ ರಾಜ್ಯೋದಯವಾಗಿದೆ ಎಂದರು.

ಕನ್ನಡ ಭಾಷೆ, ಬೆಳವಣಿಗೆ ಮತ್ತು ಅದನ್ನು ಉಳಿಸುವ ಕುರಿತು ರಮೇಶ್ ಮೇಲ್ಕಾರ್ ಮಾತನಾಡಿದರು.
ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ ಈ ಸಂದರ್ಭ ಉಪಸ್ಥಿತರಿದ್ದರು.

ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ವಂದಿಸಿದರು. ಹಿರಿಯ ಕಲಾವಿದ ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು. ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago