Categories: ಮಂಗಳೂರು

ಬಂಟ್ವಾಳ: ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ರಾಜೇಶ್ ನಾಯ್ಕ್

ಬಂಟ್ವಾಳ: ತಾಲೂಕಿನಲ್ಲಿ ಪಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮ ದ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸಕರ ಕಚೇರಿಯಲ್ಲಿ ಜುಲೈ 7  ರಂದು ಗುರುವಾರ ತುರ್ತು ಸಭೆ ನಡೆಸಿದರು.
ಮಳೆಗಾಲದಲ್ಲಿ ಉಂಟಾಗಬಹುದಾದ ಸಮಸ್ಯೆಯನ್ನು ಪರಿಹರಿಸಲು ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಯಿಂದ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ನಡೆದ ದುರಂತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಮುಂದಿನ ದಿನಗಳಲ್ಲಿ ತಾಲೂಕಿನ ಯಾವುದೇ ಭಾಗದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅವರು ತಹಶೀಲ್ದಾರ್ ಡಾ. ಸ್ಮಿತಾರಾಮು ಅವರಿಗೆ ಸೂಚಿಸಿದರು.
ಮಳೆ ಹಾನಿಯಿಂದ ಜನರ ಜೀವಕ್ಕೆ ಅಪಾಯವಾಗುವ ರೀತಿಯ ಸನ್ನಿವೇಶಗಳು ಇದ್ದರೆ , ಅದಕ್ಕೆ ಪೂರ್ವಭಾವಿ ಯಾಗಿ ಅಂತಹ ಕುಟುಂಬಗಳನ್ನು ‌ಬೇರೆ ಕಡೆಗೆ ಸ್ಥಳಾಂತರ ಮಾಡಿ ಅವರಿಗೆ ಸೂಕ್ತ ವ್ಯವಸ್ಥೆ ‌ಕಲ್ಪಿಸಬೇಕು ಎಂದು ಅವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಸ್ಮಿತಾರಾಮು ಅವರಿಂದ ನೆರೆಯ ಬಗ್ಗೆ ಮಾಹಿತಿ ಪಡೆದುಕೊಂಡ ಅವರು ತಗ್ಗುಪ್ರದೇಶದಲ್ಲಿ ವಾಸಮಾಡುವ ಕುಟುಂಬಗಳ ಎಚ್ಚರಿಕೆ ವಹಿಸಿ, ಅವರ ಬಗ್ಗೆ ಹೆಚ್ಚಿನ ನಿಗಾವಹಿಸಿ , ನೆರೆ ಬಂದ ಸಂದರ್ಭದಲ್ಲಿ ಅವರಿಗೆ ಸೂಕ್ತವಾದ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ರಸ್ತೆ ಬದಿಯಲ್ಲಿ ಮೆಸ್ಕಾಂ ವಿದ್ಯುತ್ ‌ಕಂಬಗಳಿಗೆ ಹಾಗೂ ಇತರ ಸಾರ್ವಜನಿಕ ಸೊತ್ತುಗಳಿಗೆ ಹಾನಿಯಾಗುವ ಸ್ಥಳದಲ್ಲಿ ‌ಮರಗಳು ಇದ್ದರೆ ಅಂತಹ ಮರಗಳ ತೆರವು ಕಾರ್ಯವನ್ನು ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಜೊತೆಯಾಗಿ ಮಾಡಬೇಕು ಎಂದು ತಿಳಿಸಿದರು.
ಗ್ರಾಮಾಂತರ ಪ್ರದೇಶದಲ್ಲಿ ರಸ್ತೆ ಹಾಗೂ ಇತರ ಕಡೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವ ‌ನಿಟ್ಟಿನಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸುವಂತೆಯೂ ಸೂಚಿಸಿದರು.
ಮಳೆಗಾಲದಲ್ಲಿ ಉಂಟಾಗುವ ಸಮಸ್ಯೆ ಗಳಿಗೆ ಶೀಘ್ರವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಟಾಸ್ಕ್ ಫೋರ್ಸ್ ಸಮಿತಿಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷ, ಪಿ.ಡಿ.ಒ.ಕಂದಾಯ ನಿರೀಕ್ಷಕ , ಗ್ರಾಮ ಕರಣೀಕ ಪೋಲೀಸ್ ಅಧಿಕಾರಿಗಳ ಸಭೆ ನಡೆಸುವ ಬಗ್ಗೆ ಸಭೆಯಲ್ಲಿ ತಿಳಿಸಿದರು.
Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

5 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

5 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

6 hours ago