News Karnataka Kannada
Tuesday, May 07 2024
ಮಂಗಳೂರು

ಬಂಟ್ವಾಳ: ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಭಾಗಿ

Bantwal
Photo Credit : By Author

ಬಂಟ್ವಾಳ: ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸಿದ್ದು, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಕಾನೂನಿನ ಚೌಕಟ್ಟಿನೊಳಗೆ ಶೀಘ್ರ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಬಂಟ್ವಾಳ ತಹಶೀಲ್ದಾರ್ ಸ್ಮಿತಾ ರಾಮು ಅವರು ಹೇಳಿದರು.

ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಮಣಿನಾಲ್ಕೂರು ಸೇವಾ ಸಹಕಾರಿ ಸಂಘ ಇದರ ಸರಪಾಡಿ ದಿ.ಸುಬ್ಬಣ್ಣ ಶೆಟ್ಟಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂಬ ಕಾರ್ಯಕ್ರಮದನ್ವಯ ಸರಪಾಡಿ ಗ್ರಾಮ ವಾಸ್ತವ್ಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಮಯ್ಯ ಅವರು ಮಾತನಾಡಿ, ಇದು ಉತ್ತಮ ಕಾರ್ಯವಾಗಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಅವರು ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಲ್ವಿಯಾ ಫೆರ್ನಾಂಡಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಿಂಚಣಿ ಯೋಜನೆ, ಭಾಗ್ಯಲಕ್ಷ್ಮಿ ಬಾಂಡ್ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕಂದಾಯ ಇಲಾಖಾಧಿಕಾರಿ ನರೇಂದ್ರ ಬಾಬು, ತಾಲೂಕಿನ ಇತರ ಎಲ್ಲ ಇಲಾಖಾಧಿಕಾರಿಗಳು, ಗ್ರಾ.ಪಂ.ಸದಸ್ಯರು ಭಾಗವಹಿಸಿದ್ದರು.

ಕಂದಾಯ ನಿರೀಕ್ಷಕ ಜನಾರ್ದನ ಸ್ವಾಗತಿಸಿದರು. ಉಪ ತಹಶೀಲ್ದಾರ್ ದಿವಾಕರ ಮುಗುಳ್ಯ ವಂದಿಸಿದರು. ಉಪ ತಹಶೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ಸಂಘದ ಆವರಣದಲ್ಲಿ ತೆಂಗಿನ ಸಸಿ ನೆಡಲಾಯಿತು. ಬಳಿಕ ತಹಶೀಲ್ದಾರ್ ಅವರು ಪೆರ್ಲ-ಬೀಯಪಾದೆ ಪರಿಶಿಷ್ಠ ಕಾಲನಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು