Categories: ಮಂಗಳೂರು

ಬಂಟ್ವಾಳ: ಧಾರಾಕಾರ ಮಳೆಗೆ ಶೆಡ್ ಮೇಲೆ ಗುಡ್ಡ ಜರಿದು ಓರ್ವ ಸಾವು

ಬಂಟ್ವಾಳ: ಧಾರಾಕಾರ ಮಳೆಗೆ ಪಂಜಿಕಲ್ಲು ಸಮೀಪ ನೇಲ್ಯಪಲ್ಕೆ ಸಮೀಪ ಕಜೆಬೈಲು ಎಂಬಲ್ಲಿ ಭೂಕುಸಿತವಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಈ ವೇಳೆ ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದರು, ಅದರಲ್ಲಿ ಇಬ್ಬರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿದರೆ ಓರ್ವ ಮೃತಪಟ್ಟಿದ್ದಾನೆ, ಇನ್ನೋರ್ವನನ್ನು ಮೇಲಕ್ಕೆ ತೆಗೆಯಲು ಕಾರ್ಯಚರಣೆ ಮುಂದುವರಿದಿದೆ.

ಪಾಲಕ್ಕಾಡು ನಿವಾಸಿ ವಿಜು (46) ಮೃತಪಟ್ಟ ದುರ್ದೈವಿ. ಉಳಿದಂತೆ ಕೊಟ್ಟಾಯಂ ನಿವಾಸಿ ಬಾಬು (46) ಎಂಬವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೆ , ಕಣ್ಣೂರು ನಿವಾಸಿ ಜಾನ್ (44)ಎಂಬಾತ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶೆಡ್ ನ ಶೌಚಾಲಯದ ಸಮೀಪ ಸಿಲುಕಿಕೊಂಡಿರುವ ಸಂತೋಷ್ ಅಲ್ಫೊನ್ಸ್ ಮಣ್ಣಿನಿಂದ ಹೊರತೆಗೆಯುವ ಕಾರ್ಯಚರಣೆ ಮುಂದುವರಿದಿದೆ.

ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿ ಹಾಗೂ‌ ತಹಶೀಲ್ದಾರ್ ಅವರನ್ನು ಬೆಂಗಳೂರಿನಿಂದಲೇ ದೂರವಾಣಿ ಮೂಲಕ ಸಂಪರ್ಕಿಸಿ ರಕ್ಷಣಾ ಕಾರ್ಯಚರಣೆಗೆ ನಿರ್ದೇಶನ‌ ನೀಡಿದ್ದಾರೆ.
ನಾಳೆ ಬೆಳಿಗ್ಗೆ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಜೊತೆ ಘಟನಾ ಸ್ಥಳಕ್ಕೆ ಬೇಟಿ ನೀಡುವುದಾಗಿ ಅವರು ಮಾಧ್ಯಮಕ್ಕೆ
ತಿಳಿಸಿದ್ದಾರೆ.

ಡಿ.ಸಿ., ಎಸ್.ಪಿ.ಸಹಿತ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿ
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ! ಕೆ.ವಿ.ರಾಜೇಂದ್ರ, ಎಸ್.ಪಿ.ಹೃಷಿಕೇಶ್ ಸೋನಾವಣೆ, ಮಂಗಳೂರು ಸಹಾಯಕ‌ ಆಯುಕ್ತ ಮದನ್ ಮೋಹನ್, ತಹಶೀಲ್ದಾರ್ ಸ್ಮಿತಾರಾಮು, ಪಿ.ಡಿ.ಒ.ವಿದ್ಯಾಶಿವಾನಂದ, ಪೋಲಿಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಕರಣೀಕ ಕುಮಾರ್, ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ, ಸದಸ್ಯರಾದ ಮೋಹನ್ ದಾಸ್ , ಬಾಲಕೃಷ್ಣ ಪೂಜಾರಿ, ಸ್ಥಳೀಯ ಪ್ರಮುಖರಾದ ಸುದರ್ಶನ್, ಪಿಯೂಸ್ ಎಲ್.ರೋಡ್ರಿಗಸ್, ಬೇಬಿಕುಂದರ್, ಸುರೇಶ್ ಜೋರಾ ಮತ್ತಿತರರು ಬೇಟಿ ರಕ್ಷಣಾ ಕಾರ್ಯಚರಣೆಗೆ ಸಹಕರಿಸಿದರು.

ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಎನ್‌‌ಡಿ.ಆರ್.ಎಫ್ ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಚರಣೆ ನಡೆಯಿತು.

Gayathri SG

Recent Posts

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

21 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

47 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago