ಮಂಗಳೂರು

ಹತ್ಯೆ ಆರೋಪಿಗಳೊಂದಿಗೆ ತಿರುಗಾಟ ಮಾಡಿದವರು ಯಾರು: ಬಿ.ರಮಾನಾಥ ರೈ ಪ್ರಶ್ನೆ

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ “ಬಂಟ್ವಾಳ ಪ್ರಜಾಧ್ವನಿ ಯಾತ್ರೆ” ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಅಧಿಕಾರವಧಿಯ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ ಕೋಟಿ ರೂಗಳ ಪ್ರಗತಿಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಯಾತ್ರೆ ಮೂಲಕ ಮಾಡಲಾಗುವುದು. ಒಂದೇ ದಿನ ಮೂರು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡು ಯಾತ್ರೆಯನ್ನು ನಡೆಸಲಾಗುವುದು. ಪ್ರತಿ ದಿನ ಸಂಜೆ ಪಕ್ಷದ ಜಿಲ್ಲೆ, ರಾಜ್ಯದ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ಸಾರ್ವಜನಿಕ ಸಭೆ ನಡೆಸಲಾಗುತ್ತದೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಯಾತ್ರೆ ಆರಂಭಗೊಳ್ಳಲಿದೆ.

ಇನ್ನೊಬ್ಬರು ಮಾಡಿದ್ದನ್ನು ಹೇಳೋದಿಲ್ಲ:
ಇನ್ನೊಬ್ಬರು ಮಾಡಿದ ಕೆಲಸವನ್ನು ನಾನು ಮಾಡಿದ್ದು ಎಂದು ಎಲ್ಲೂ ಹೇಳುವುದಿಲ್ಲ ಎಂದು ಹೇಳಿದ ರಮಾನಾಥ ರೈ, ಬಂಟ್ವಾಳದ ಒಳಚರಂಡಿ ಯೋಜನೆ ಮಂಜೂರಾತಿಯನ್ನು 2017ರ ಅಕ್ಟೋಬರ್ 10ರಂದು ನಾನು ಮಾಡಿಸಿದ್ದೇನೆ. ಇದಕ್ಕೆ ಸಂಬಂಧಿಸಿದ ದಾಖಲೆಗಳು ನನ್ನಲ್ಲಿ ಇದೆ. ಆದರೆ ಆರು ವರ್ಷಗಳಾದರೂ ಕೆಲಸವಾಗಿಲ್ಲ ಎಂದು ಹೇಳಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತನ್ನ ಅವಧಿಯಲ್ಲಿ ಆಗಿದ್ದು ಎಂದು ನೆನಪಿಸಿದ ಅವರು, ಬಂಟ್ವಾಳ ತಾಲೂಕಿನ ಹೆಮ್ಮೆ ಎನಿಸಿದ ಪಂಜೆ ಮಂಗೇಶರಾಯರ ಸ್ಮಾರಕ ಭವನ ನಿರ್ಮಾಣಕ್ಕೆ ಎಂಟು ಕೋಟಿಗಳನ್ನು ,ಅಂಬೇಡ್ಕರ್ ಭವನಕ್ಕೂ ಮೂರು ಕೋಟಿ ಮಂಜೂರುಗೊಳಿಸಿ ಕೆಲಸ ಆರಂಭಿಸಲಾಗಿತ್ತು. ಇದುವರೆಗೂ ಈಗಿನ ಶಾಸಕರ ಅವಧಿಯಲ್ಲಿ ಮುಗಿಸಿಲ್ಲ ಎಂದರು.

ಈಗ ಬಂಟ್ವಾಳ ಶಾಂತಿಯುತವಾಗಿದೆ ಎನ್ನುತ್ತಾರೆ. ಹಿಂದೆ ಮತೀಯ ಹೆಸರಲ್ಲಿ ಹತ್ಯೆಯನ್ನು ಕಾಂಗ್ರೆಸ್ ಮಾಡಿರಲಿಲ್ಲ. ಹತ್ಯೆ ಆರೋಪಿಗಳೊಂದಿಗೆ ತಿರುಗಾಟ ಮಾಡಿದವರು ಯಾರು ಎಂದು ಪ್ರಶ್ನಿಸಿದ ರೈ, ಮರಳು ಮಾಫಿಯಾ, ಇಸ್ಪೀಟ್ ಕ್ಲಬ್ ನವರ ಬ್ಯಾನರ್ ಕಟೌಟ್ ಗಳು ಈಗ ರಾರಾಜಿಸುತ್ತಿವೆ ಎಂದರು.

ಯಾತ್ರೆ ಕುರಿತು ಮುಖಂಡ ಪಿಯೂಸ್ ಎಲ್. ರೋಡ್ರಿಗಸ್ ಮಾಹಿತಿ ನೀಡಿದರು. ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಪದ್ಮಪ್ರಸಾದ್ ಜೈನ್, ಸುದರ್ಶನ ಜೈನ್, ಮಧುಸೂಧನ ಶೆಣೈ, ಅಬ್ಬಾಸ್ ಆಲಿ ಬಿ.ಎಂ., ಮಾಯಿಲಪ್ಪ ಸಾಲಿಯಾನ್. ಸುರೇಶ್ ಜೋರ, ಚಂದ್ರಶೇಖರ ಪೂಜಾರಿ, ಚಂದ್ರಶೇಖರ ಭಂಡಾರಿ, ಸುಧಾಕರ ಶೆಣೈ ಖಂಡಿಗ ಮೊದಲಾದವರು ಉಪಸ್ಥಿತರಿದ್ದರು

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago