News Karnataka Kannada
Tuesday, April 23 2024
Cricket
ಮಂಗಳೂರು

ಬಂಟ್ವಾಳ: ಗೋಫಾರ್ಮ್ ಕಟ್ಟಡಕ್ಕೆ ನೀಡಿರುವ ಪರವಾನಿಗೆ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ

Bantwal: Protests demanding cancellation of licence issued to Gopharm building
Photo Credit : News Kannada

ಬಂಟ್ವಾಳ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲಪದವು ಕೊಡಂಚಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ಗೋಫಾರ್ಮ್ ಕಟ್ಟಡಕ್ಕೆ ನೀಡಿರುವ ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ವಿಟ್ಲ ಹಿಂದೂ ಹೋರಾಟ ಸಮಿತಿ ವತಿಯಿಂದ ಸೋಮವಾರ ಪುಣಚ ಗ್ರಾಮ ಪಂಚಾಯತ್ ಹೊರಭಾಗದಲ್ಲಿ ಪ್ರತಿಭಟನೆ ನಡೆಯಿತು.

ಸಮಿತಿ ಸಂಚಾಲಕ ಅಕ್ಷಯ್ ರಜಪೂತ್ ಮಾತನಾಡಿ ಕೊಡಂಚಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ಗೋಫಾರ್ಮ್ ಕಟ್ಟಡಕ್ಕೆ ಬಹುತೇಕ ಕಾಮಗಾರಿ ಮುಗಿದ ಬಳಿಕ ಗ್ರಾಮ ಪಂಚಾಯತ್ ಪರವಾನಿಗೆಯನ್ನು ನೀಡಲಾಗಿದ್ದು, ಈ ಕ್ರಮ ಕಾನೂನುಬಾಹಿರ ಕ್ರಮವಾಗಿರುತ್ತದೆ.

ಕಟ್ಟಡದ ಅಡಿಸ್ಥಳವು ಸರಕಾರಿ ಎಂಬ ಸಂಶಯವಿದೆ. ಕೇರಳ ಗಡಿ ಪ್ರದೇಶವಾಗಿರುವುದರಿಂದ ಅಕ್ರಮ ಗೋಸಾಗಾಟವಾಗುವ ಸಾಧ್ಯತೆಗಳಿವೆ ಎಂದು ಆರೋಪಿಸಿದರು. ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷರಲ್ಲಿ ಮನವಿ ಸಲ್ಲಿಸಿ, ಕೂಡಲೇ ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು ಸ್ಪಷ್ಟನೆ ನೀಡಿ ಕಾನೂನು ಬಾಹಿರವಾಗಿ ಪರವಾನಿಗೆಯನ್ನು ನೀಡಿಲ್ಲ. ಈ ಬಗ್ಗೆ ಜೂ.27 ರಂದು ನಡೆಯುವ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಅದರ ನಿರ್ಣಯದಂತೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂದೆಗೆದುಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಈಶ್ವರ ನಾಯ್ಕ ಸಾಯ, ಪ್ರಧಾನ ಕಾರ್ಯದರ್ಶಿ ಅಜಯ್ ನೀರ್ಕಜೆ ಇನ್ನಿತರರು ಭಾಗವಹಿಸಿದ್ದರು. ವಿಟ್ಲ ಪೊಲೀಸರು ಬಂದೋಬಸ್ತ್ ನಡೆಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು