Categories: ಮಂಗಳೂರು

ಬಂಟ್ವಾಳ: ಸಂಗಬೆಟ್ಟು ಗ್ರಾಮ ಪಂಚಾಯತ್ ಬಳಿ ಮನಸ್ಸಿಗೆ ಆಹ್ಲಾದ ನೀಡುವ ಅಮೃತ ಉದ್ಯಾನವನ

ಬಂಟ್ವಾಳ: ಉದ್ಯಾನವನಗಳು ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಮನಸ್ಸಿಗೆ ಆಹ್ಲಾದ ನೀಡುತ್ತವೆ. ಸರಕಾರವೂ ಗ್ರಾಮಕ್ಕೊಂದು ಉದ್ಯಾನವನ ಬೇಕೆಂದು ಸ್ವಾತಂತ್ಯದ ಅಮೃತ ಮಹೋತ್ಸವದ ಅಮೃತ ಗ್ರಾಮ ಪಂಚಾಯತ್ ಯೋಜನೆಯಲ್ಲಿ ಸೂಚಿಸಲಾಗಿದೆ. ಆ ಪ್ರಯುಕ್ತ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ಬಳಿ ಸುಂದರ ಸಾರ್ವಜನಿಕ ಅಮೃತ ಉದ್ಯಾನವನ ನಿರ್ಮಾಣಗೊಂಡಿದೆ.

ಗ್ರಾಮ ಪಂಚಾಯತ್‌ಗೆ ಅಮೃತ ಗ್ರಾಮ ಪಂಚಾಯತ್ ಯೋಜನೆಯಡಿ ೨೫ ಲಕ್ಷ ರೂ. ಅನುದಾನ ನೀಡಲಾಗುತ್ತಿದ್ದು, ಸೂಚಿತ ವಿವಿಧ ಕಾಮಗಾರಿಗಳನ್ನು ನಡೆಸುವುದರೊಂದಿಗೆ ಸಾರ್ವಜನಿಕ ಉದ್ಯಾನವನ ನಿರ್ಮಾಣವನ್ನು ಸೂಚಿಸಲಾಗಿದೆ.ಸಂಗಬೆಟ್ಟು ಗ್ರಾಮ ಪಂಚಾಯತ್‌ನ ಕೇಂದ್ರ ಸ್ಥಾನ ಸಿದ್ದಕಟ್ಟೆಯಲ್ಲಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕೇಂದ್ರ ಮೈದಾನವಿದ್ದು ಅದರ ಪಕ್ಕ ಸಾರ್ವಜನಿಕ ಉದ್ಯಾನವನ ನಿರ್ಮಾಣಗೊಂಡಿದೆ.

ಸಂಗಬೆಟ್ಟು ಗ್ರಾಮ ಪಂಚಾಯತ್ ಕಚೇರಿಗೆ ತೆರಳುವ ದ್ವಾರದ ಬಳಿಯೂ ಇಕ್ಕೆಗಳಲ್ಲಿ ಸುಂದರ ಉದ್ಯಾನವನ ನಿರ್ಮಸಲಾಗಿದ್ದು, ನಯನ ಮನೋಹರವಾಗಿ ಆಕರ್ಷಿಸುತ್ತಿದೆ. ಇದರಿಂದ ಗ್ರಾಮ ಪಂಚಾಯತ್ ಕಚೇರಿಯ ಸೌಂದರ್ಯ ಇಮ್ಮಡಿಯಾಗಿದೆ.

ಉದ್ಯಾನವನ ಹಸುರು ಹುಲ್ಲುಗಾವಲಿನಿಂದ ಪ್ರಾಕೃತಿಕವಾಗಿ ಹಚ್ಚ ಹಸುರಿನಿಂದ ಕಂಗೊಳಿಸುತ್ತಿದೆ. ಮಕ್ಕಳಿಗೆ ಜೋಕಾಲಿಯಾಡಲು ಜೋಕಾಲಿ, ಜಾರು ಬಂಡಿ, ಹಿರಿಯ ನಾಗರಿಕರಿಗೆ ಕಾಲ್ನಡಿಗೆ ದಾರಿ, ಕುಳಿತುಕೊಳ್ಳಲು ಬೆಂಚ್‌ಗಳನ್ನು ಅಳವಡಿಸಲಾಗಿದೆ.ದ್ವಾರದ ಬಳಿ ನಿರ್ಮಿಸಲಾದ ಉದ್ಯಾನವನದಲ್ಲಿ ಹಸುರು ಲಾನ್, ಹೂ. ಹಣ್ಣು ಹಂಪಲುಗಳ ಗಿಡಗಳನ್ನು ನೆಡಲಾಗಿದೆ. ಸಂಜೆ ಹೊತ್ತು ಸಾರ್ವಜನಿಕರು, ಮಕ್ಕಳು ಉದ್ಯಾನವನದಲ್ಲಿ ವಿಹರಿಸುತ್ತಾರೆ.

ಸಂಗಬೆಟ್ಟು ಗ್ರಾಮ ಪಂಚಾಯತ್ ಅಮೃತ ಯೋಜನೆಗೆ ಆಯ್ಕೆಗೊಂಡಿದ್ದು, ಅಮೃತ ಉದ್ಯಾನವನಕ್ಕೆ ಅವಕಾಶ ಲಭಿಸಿತು. ಅದರಂತೆ ಉದ್ಯೋಗ ಖಾತರಿ ಯೋಜನೆಯಲ್ಲಿ ಸುಂದರ ಉದ್ಯಾನವನ ನಿರ್ಮಾಣಗೊಂಡಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಕೊಳ್ಳಬೇಕು.-ಸತೀಶ್ ಪೂಜಾರಿ ಅಲಕ್ಕೆ, ಅಧ್ಯಕ್ಷರು, ಸಂಗಬೆಟ್ಟು ಗ್ರಾ.ಪಂ.

Sneha Gowda

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

11 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

35 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

56 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

1 hour ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago