Categories: ಮಂಗಳೂರು

ಬಂಟ್ವಾಳ: ಸ್ಕೇಟಿಂಗ್ ಚಾಂಪಿಯನ್‍ಶಿಪ್, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ಸಾಧನೆ

ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ತರಬೇತಿ ಪಡೆಯುತ್ತಿರುವ 8 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸ್ಪರ್ಧಾ ಕೂಟದಲ್ಲಿ ಕಳ್ಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಹಂಸಿಕಾ ಹಾಗೂ ಗಿತೇಶ್ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ. ಪೊಳಲಿ ದ.ಕ. ಜಿ.ಪಂ. ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿ ಅಮೃತ್ ಎಸ್. ಇನ್‍ಲೈನ್ ಸ್ಕೇಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಗೆದ್ದುಕೊಂಡಿದ್ದಾನೆ. ವಿವಿಧ ವಯೋಮಾನಗಳ ಸ್ಕೇಟಿಂಗ್‍ನಲ್ಲಿ ಇದೇ ಶಾಲೆಯ ಸಂದೀಪ್ ಮತ್ತು ಮಂಜುನಾಥ್ ಪ್ರಥಮ ಸ್ಥಾನ ಸಾಥ್ವಿಕ್, ಶರಣ್ಯ ಹಾಗೂ ಸಂಜು ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ.

ಮಾರ್ಷಲ್ ಆರ್ಟ್ ತರಬೇತುದಾರರಾದ ರಾಜೇಶ್ ಬ್ರಹ್ಮರಕೂಟ್ಲು ಬಾಲಕರಿಗೆ ತರಬೇತಿಯನ್ನು ನೀಡಿದ್ದು, ಎನ್‍ಐಐಟಿಕೆ ವಿದ್ಯಾರ್ಥಿನಿ ವೆನಿಲ್ಲಾ ಮಣಿಕಂಠ ಬಾಲಕಿಯರಿಗೆ ತರಬೇತಿಯನ್ನು ನೀಡಿದ್ದಾರೆ. ಪೊಳಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಾನಂದ ಹಾಗೂ ಶಿಕ್ಷಕರು ಪೋತ್ಸಾಹ, ಮರ್ಗದರ್ಶನ ನೀಡಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಮಿನಿ ಒಲಂಪಿಕ್ ಜೂಡೋದಲ್ಲೂ ಸ್ಪರ್ಧಿಸಿದ್ದರು ಎನ್ನುವುದು ಗಮನಾರ್ಹ. ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಅಲ್ಲಿನ ಶ್ರೀ ವಿವೇಕಾಚೈತನ್ಯಾನಂದ ಸ್ವಾಮೀಜಿ ಅವರ ಪ್ರೋತ್ಸಾಹ, ಮಾರ್ಗದರ್ಶನದಲ್ಲಿ ಕರಾಟೆ, ಜೂಡೋ, ಸಿಲಂಬಂ ಮತ್ತಿತರ ಮಾರ್ಷಲ್ ಆಟ್ರ್ಸ್ ಹಾಗೂ ಸ್ಕೇಟಿಂಗ್ ತರಬೇತಿ ನಡೆಯುತ್ತಿದ್ದು ವಿದ್ಯಾರ್ಥಿಗಳ ವಿಶೇಷ ಸಾಧನೆಗೆ ಸ್ವಾಮೀಜಿಯವರು ಸಂತಸ ಹಾಗೂ ಅಭಿನಂದನೆ ವ್ಯಕ್ತಪಡಿಸಿದ್ದಾರೆ.

Ashika S

Recent Posts

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

7 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

16 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

27 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

46 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

57 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago