ಮಂಗಳೂರು

ಬಂಟ್ವಾಳ: ‌ನಾಪತ್ತೆಯಾಗಿದ್ದ ವ್ಯಕ್ತಿಯ ತಲೆ ಬುರುಡೆ ಪತ್ತೆ

ಬಂಟ್ವಾಳ: ವಿಟ್ಲ ಸಮೀಪದ ‌ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ಪತ್ತೆಯಾದ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ.

ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಗುರುತಿಸಲಾಗಿದೆ. ನಾಗೇಶ್ ಗೌಡ ರವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆ.8ರಂದು ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಮಂದಿಗೆ ತಲೆಬುರುಡೆ, ಎಲುಬು ಹಾಗೂ ಆ ವ್ಯಕ್ತಿ‌ ಧರಿಸಿರುವುದಾಗಿ ಸಂಶಯಿಸಲ್ಪಟ್ಟ ಬಟ್ಟೆ ಕಾಣಸಿಕ್ಕಿದೆ. ಬಳಿಕ ಅವರು ಮರಳಿಬಂದು ಮನೆಮಂದಿಗೆ ವಿಚಾರ ತಿಳಿಸಿದ್ದಾರೆ. ರಾತ್ರಿ‌ ವೇಳೆ ಅವರು ಈ ವಿಚಾರವನ್ನು ವಿಟ್ಲ ಠಾಣಾ ಪೊಲೀಸರಿಗೆ ತಿಳಿಸಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿ ನಾಪತ್ತೆ ಪ್ರಕರಣಗಳ ಜಾಡು ಹಿಡಿದು ತನಿಖೆ ನಡೆಸಿದ್ದು, ಈ ವೇಳೆ ನಾಪತ್ತೆಯಾದ ನಾಗೇಶ್ ರವರ ಮಗನನ್ನು ಸ್ಥಳಕ್ಕೆ ಕರೆಸಿದ್ದರು. ಈ ವೇಳೆ ಅವರು ನಾಪತ್ತೆಯಾಗುವ ದಿನ ಅವರು ಧರಿಸಿದ್ದ ಬಟ್ಟೆ ಹಾಗೂ ತಲೆಬುರುಡೆ ಸಮೀಪ ಪತ್ತೆಯಾಗಿದ್ದ ಬಟ್ಟೆಯ ಆಧಾರದಲ್ಲಿ ಅದು ನಾಗೇಶ್ ಗೌಡರದ್ದೆ ಎಂದು ಅವರ ಮಗ ಗುರುತು ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗೇಶ್ ಗೌಡ ರವರು ನೆಕ್ಕರೆ ಕಾಡು ರಸ್ತೆಯಾಗಿ ಮನೆಯೊಂದಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago