Categories: ಮಂಗಳೂರು

ಬಂಟ್ವಾಳ: ಆಸ್ಪತ್ರೆಗೆ ತೆರಳಿ ರಕ್ತದೊತ್ತಡ ಪರೀಕ್ಷೆ ನಡೆಸಿದ ಶ್ರೀನಿವಾಸ ಪೂಜಾರಿ

ಬಂಟ್ವಾಳ: ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿ ರಕ್ತದೊತ್ತಡ ಪರೀಕ್ಷೆ ನಡೆಸಿದರು.

ಅವರು ಮಾ.18 ರಂದು ಬೆಳಿಗ್ಗೆ 10.30 ಗಂಟೆಯ ವೇಳೆ ಬೆಂಗಳೂರಿಗೆ ತೆರಳುತ್ತಿದ್ದ ಸಚಿವರು ದಾರಿ ಮಧ್ಯೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿ, ಸಾಮಾನ್ಯರಂತೆ ಸಾಲಿನಲ್ಲಿ ನಿಂತು ವೈದ್ಯರ ಬಳಿ ರಕ್ತದೊತ್ತಡ ಪರೀಕ್ಷೆ ಮಾಡಿಸಿದರು.

ಆಡಳಿತ ವೈದ್ಯಾಧಿಕಾರಿ ಡಾ| ಪುಷ್ಪಲತಾ ಅವರು ಕಚೇರಿಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸಿದರೂ, ಅವರು ವಿನಂತಿಯನ್ನು ನಿರಾಕರಿಸಿ , ರೋಗಿಗಳ ಜೊತೆಗೇ ಪರೀಕ್ಷೆ ಮಾಡಿಸಿಕೊಂಡು ,ಸರಳತೆ ಮೆರೆದರು.

‌ ಅವರು ಇಂದು ತುರ್ತಾಗಿ ಬೆಂಗಳೂರಿನಲ್ಲಿ ನಡೆಯುವ ಮೀಟಿಂಗ್ ನಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ದಾರಿ ಮಧ್ಯೆ ಸರಕಾರಿ ಆಸ್ಪತ್ರೆಗೆ ತೆರಳಿದರು.

ಕಳೆದ ಕೆಲ ದಿನಗಳಿಂದ ಕಾರ್ಯಕ್ರಮದ ಒತ್ತಡ ಹಾಗೂ ಸರಿಯಾಗಿ ನಿದ್ರೆಯಿಲ್ಲದ ಕಾರಣ ಇವರಿಗೆ ತಲೆನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ವೈದ್ಯರು ಪರೀಕ್ಷೆ ನಡೆಸಿ ರಕ್ತದೊತ್ತಡ ನಾರ್ಮಲ್ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅರೋಗ್ಯ ರಕ್ಷಾ ಸಮಿತಿ ಸದಸ್ಯ ವಿಶ್ವನಾಥ ಚೆಂಡ್ತಿಮಾರ್ ಉಪಸ್ಥಿತರಿದ್ದರು.

Ashika S

Recent Posts

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

9 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

18 mins ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

37 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

1 hour ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

1 hour ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

2 hours ago