News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ : ಡಿ.13 ರಂದು 16ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ

The 16th Annual Children's Sahitya Sammelana to be held on Dec. 13
Photo Credit : By Author

ಬಂಟ್ವಾಳ : ‘ಮಕ್ಕಳ ಕಲಾ ಲೋಕ’ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ತನ್ನ 16ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಇದೇ ದಶಂಬರ್ 13ರಂದು ಕಬಕ ಸಮೀಪದ ಓಜಾಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ನಡೆಯಲಿದೆ.

ಬಂಟ್ವಾಳ ತಾಲೂಕಿನ ಶಿಕ್ಷಣ ಇಲಾಖೆ ಮತ್ತು ಇಡ್ಕಿದು ಗ್ರಾಮ ಪಂಚಾಯತು ಸಹಕಾರದೊಂದಿಗೆ ನಡೆಯುವ ಈ ಸಮ್ಮೇಳನದ ಅಧ್ಯಕ್ಷತೆಯನ್ನು ಓಜಾಲ ಶಾಲಾ 6ನೇ ತರಗತಿ ವಿದ್ಯಾರ್ಥಿನಿ ಶ್ರುತಿಕಾ ವಹಿಸುವರು.

15ನೇ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಬಿ. ಉದ್ಘಾಟಿಸುವರು. ಪುತ್ತೂರು ಪಾಣಾಜೆ ವಿವೇಕ ಹಿರಿಯ ಪ್ರಾಥಮಿಕ ಶಾಲಾ 7ನೇ ತರಗತಿ ವಿದ್ಯಾರ್ಥಿನಿ ಧನ್ವೀ ರೈ ಕೋಟೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ದಿನವಿಡೀ ಜರಗುವ ಮಕ್ಕಳ ವಿವಿಧ ಸಾಹಿತ್ಯ ಕಾರ್ಯಕ್ರಮಗಳಲ್ಲಿ ತಾಲೂಕಿನ ವಿವಿಧ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸ್ವಾಗತ, ನಿರ್ವಹಣೆ, ಧನ್ಯವಾದ, ಗೋಷ್ಠಿಗಳ ಅಧ್ಯಕ್ಷತೆಯನ್ನು ನಿರ್ವಹಿಸಲಿರುವರು. ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷ ಎಂ. ಸುಧೀರ್ ಕುಮಾರ್ ಶೆಟ್ಟಿಯವರ ಗೌರವಾಧ್ಯಕ್ಷತೆ ಮತ್ತು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಬಿ. ಇವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಗಿದ್ದು ವಿವಿಧ ಉಪಸಮಿತಿಗಳನ್ನೂ ರಚಿಸಲಾಗಿದೆ.

ಸಾಹಿತ್ಯ ರಚನೆ, ಆಶು ಮಾತುಕತೆ, ಚಿತ್ತ ಚಿತ್ತಾರ ಮತ್ತು ಕಿರುನಾಟಕಗಳನ್ನು ಸಮ್ಮೇಳನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾಹಿತ್ಯ ರಚನೆಗೆ ವಿಷಯಗಳನ್ನು ಉದ್ಘಾಟನಾ ಪೂರ್ವದಲ್ಲೇ ತಿಳಿಸಲಾಗುವುದು.

ಸಮಾರೋಪ ಸಮಾರಂಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ. ಮುಡಿಪು ಸರಕಾರಿ ಪ.ಪೂ ಕಾಲೇಜು ವಿದ್ಯಾರ್ಥಿನಿ ಲಾವಣ್ಯ ಸಮಾರೋಪ ಭಾಷಣ ನೀಡುವರು. ಸಾಹಿತ್ಯ ತಾರೆ ಮತ್ತು ಬಾಲಬಂಧು ಪುರಸ್ಕಾರಗಳನ್ನು ಪ್ರದಾನ ಮಾಡಲಾಗುವುದು. ಪೂರ್ವಾಹ್ನ ತಾಲೂಕು ಕ.ಸಾ.ಪ. ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಪರಿಷತ್ ಧ್ವಜಾರೋಹಣವನ್ನು ಮತ್ತು ಚಿದಾನಂದ ಪೆಲತ್ತಿಂಜ ಕನ್ನಡ ಧ್ವಜಾರೋಹಣವನ್ನು ನಿರ್ವಹಿಸುವರು. ಹಿರಿಯ ಸಾಹಿತಿ ವಿ.ಬಿ. ಕುಳಮರ್ವ ಕುಂಬಳೆ ಮಕ್ಕಳ ಸ್ವರಚಿತ ಸಾಹಿತ್ಯ ಕೃತಿಗಳನ್ನು ಬಿಡುಗಡೆ ಮಾಡುವರು.

“ಬಾಲಬಂಧು” ಪ್ರಶಸ್ತಿಗೆ ಪತ್ರಕರ್ತ, ರಂಗನಿರ್ದೇಶಕ ಮೌನೇಶ್ ವಿಶ್ವಕರ್ಮ ಆಯ್ಕೆ

‘ಮಕ್ಕಳ ಕಲಾ ಲೋಕ’ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಇದರ ವತಿಯಿಂದ ಕೊಡಮಾಡುವ ಬಾಲಬಂಧು ಪ್ರಶಸ್ತಿಗೆ ಪತ್ರಕರ್ತ,ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ಆಯ್ಕೆಯಾಗಿದ್ದು, 16ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು ತಿಳಿಸಿದರು.

ಮೌನೇಶ ವಿಶ್ವಕರ್ಮ‌ಅವರು ಪತ್ರಕರ್ತರಾಗಿ, ರಂಗ ನಿರ್ದೇಶಕರಾಗಿ ಬಂಟ್ವಾಳ ತಾಲೂಕಿನ ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ, ಕಲೆ ಹಾಗೂ ಮಕ್ಕಳ ರಂಗ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದಾರೆ.‌ ಅವರ ಕ್ರಿಯಾಶೀಲತೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು