ಬಂಟ್ವಾಳ: ಕೊಯಿಲ ಹನುಮಾನ್ ನಗರದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಧಾರ್ಮಿಕ ಸಭೆ

ಬಂಟ್ವಾಳ: ಕಳೆದ 19 ವರ್ಷಗಳ ಹಿಂದೆ ಆರಂಭಗೊಂಡ ರಾಯಿ-ಕೊಯಿಲ ಅರಳ ಸಾರ್ವಜನಿಕ ಶ್ರೀ ಶಾರದೋತ್ಸವವು ಸ್ಥಳದಾನಿಗಳ ನೆರವಿನಿಂದ ಇದೀಗ ಸ್ವಂತ ನೂತನ ರಂಗಮಂದಿರದಲ್ಲಿ 20ನೇ ವರ್ಷದ ಆರಾಧನೆ ನಡೆಯಲು ದೇವರ ಪ್ರೇರಣೆ ಮತ್ತು ಸಂಘಟಕರ ಭಕ್ತಿಯ ಪ್ರತೀಕವಾಗಿದೆ. ಈ ರಂಗಮಂದಿರಕ್ಕೆ ರೂ 10ಲಕ್ಷ ಮೊತ್ತದ ಅನುದಾನ ನೀಡುವುದಾಗಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.

ಇಲ್ಲಿನ ರಾಯಿ-ಕೊಯಿಲ- ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಕೊಯಿಲ ಹನುಮಾನ್ ನಗರದಲ್ಲಿ ಬುಧವಾರ ನಡೆದ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಧಾರ್ಮಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ದಿಕ್ಸೂಚಿ ಭಾಷಣ ಮಾಡಿ, ‘ಕಾಶ್ಮೀರ ಪುರವಾಸಿನಿ ಎಲ್ಲೆಡೆ ಆರಾಧನೆಯಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಉದ್ಯಮಿ ದಿಲ್ ರಾಜ್ ಆಳ್ವ ಮಂಗಳೂರು, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಉದ್ಯಮಿ ಬಿ.ರಘು ಸಪಲ್ಯ ಪಾಣೆಮಂಗಳೂರು ಶುಭ ಹಾರೈಸಿದರು.

ಇದೇ ವೇಳೆ 25 ಸೆಂಟ್ಸ್ ಜಮೀನು ಕೊಡುಗೆ ನೀಡಿದ ಸ್ಥಳದಾನಿ ಶಶಿಕಲಾ ಎಂ.ದೇವಪ್ಪ ಶೆಟ್ಟಿ ಮಾವಂತೂರು, ಪೂರ್ಣಿಮಾ ಎಂ.ದುರ್ಗಾದಾಸ್ ಶೆಟ್ಟಿ, ಎಂ.ಗೀತಾ ಸುಭಾಶ್ಚಂದ್ರ ಶೆಟ್ಟಿ , ಶೈಲಿನಿ ಶರತ್ ಇವರನ್ನು ಸನ್ಮಾನಿಸಲಾಯಿತು.

ರಾಯಿ ಗ್ರಾ.ಪಂ.ಅಧ್ಯಕ್ಷೆ ರತ್ನಾ ಆನಂದ, ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಪ್ರಮುಖರಾದ ಡಾ.ಸುರೇಖ ಶೆಟ್ಟಿ ಮುಡಿಪು, ಕಿರಣ್ ಕುಮಾರ್ ಮಂಜಿಲ, ಜಯಪ್ರಕಾಶ್ ಜಕ್ರಿಬೆಟ್ಟು, ಸುಪ್ರೀತ್ ಆಳ್ವ ಪೊನ್ನೋಡಿ, ಸುದರ್ಶನ್ ಬಜ, ಶಾರದೋತ್ಸವ ಸಮಿತಿ ಅಧ್ಯಕ್ಷ ರಂಜನ್ ಕುಮಾರ್ ಶೆಟ್ಟಿ ಅರಳ, ಕಾರ್ಯದರ್ಶಿ ಉಮೇಶ ಡಿ.ಎಂ. ಮತ್ತಿತರರು ಇದ್ದರು.

ಟ್ರಸ್ಟಿ ವಸಂತ ಕುಮಾರ್ ಅಣ್ಣಳಿಕೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಟ್ರಸ್ಟಿ ಡೊಂಬಯ ಅರಳ ವಂದಿಸಿ, ಟ್ರಸ್ಟಿ ದಿನೇಶ ಸುವರ್ಣ ಕುದ್ಕೋಳಿ ಕಾರ್ಯಕ್ರಮ ನಿರೂಪಿಸಿದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

6 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

6 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

7 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago