News Karnataka Kannada
Monday, May 06 2024
ಮಂಗಳೂರು

ಬಂಟ್ವಾಳ: ನ.12, 13ರಂದು ಅಮ್ಮುಂಜೆಯಲ್ಲಿ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ

Bantwal
Photo Credit : By Author

ಬಂಟ್ವಾಳ: ಸಾಹಿತ್ಯದಲ್ಲಿ ನಾವೀನ್ಯ ಎಂಬ ಆಶಯದೊಂದಿಗೆ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಮ್ಮುಂಜೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನವೆಂಬರ್ 12 ಮತ್ತು 13ರಂದು ಹಿರಿಯ ಪತ್ರಕರ್ತ ಪ್ರೊ.ಕೆ. ಬಾಲಕೃಷ್ಣ ಗಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಸ್ವಾಗತ ಸಮಿತಿ ಅಧ್ಯಕ್ಷ ಉಮೇಶ್ ಸಾಲಿಯಾನ್ ಬೆಂಜನಪದವು, ಪ್ರಧಾನ ಸಂಚಾಲಕ ಅಬುಬಕರ್ ಅಮ್ಮುಂಜೆ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನ.12, ಶನಿವಾರ ಬೆಳಗ್ಗೆ 10 ಗಂಟೆಗೆ ಅಮ್ಮುಂಜೆಗುತ್ತು ಕರುಣಾಕರ ಆಳ್ವ ಧ್ವಜಾರೋಹಣ ನೆರವೇರಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಪರಿಷತ್ ಧ್ವಜ ಮತ್ತು ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಮೆರವಣಿಗೆ:
3.30ಕ್ಕೆ ಬಡಕಬೈಲು ಪೇಟೆಯಿಂದ ಬಡಕಬೈಲು ಪರಮೇಶ್ವರ ರಾವ್ ಮಹಾದ್ವಾರದಿಂದ ಸಮ್ಮೇಳನ ನಡೆಯುವ ವೀರಯೋಧ ಯಾದವ ಪೂಜಾರಿ ಸಭಾಂಗಣ, ಪೊಳಲಿ ಶೀನಪ್ಪ ಹೆಗ್ಡೆ ಪ್ರಾಂಗಣ ಹಾಗೂ ಅಮ್ಮುಂಜೆಗುತ್ತು ಸಿದ್ಧಣ್ಣ ಶೆಟ್ಟಿ ಮುಖ್ಯದ್ವಾರದವರೆಗೆ ಮೆರವಣಿಗೆ ನಡೆಯುವುದು. ಅಮ್ಮುಂಜೆಗುತ್ತು ಪಟೇಲ್ ಶಂಕರ ಶೆಟ್ಟಿ ವೇದಿಕೆಯಲ್ಲಿ ಸಮ್ಮೇಳನ ನಡೆಯಲಿದೆ. ಮೆರವಣಿಗೆಯಲ್ಲಿ ಕನ್ನಡ ಭುವನೇಶ್ವರಿಗೆ ಅಮ್ಮುಂಜೆ ಗ್ರಾಪಂ ಅಧ್ಯಕ್ಷರಾದ ವಾಮನ ಆಚಾರ್ಯ, ಕರಿಯಂಗಳ ಗ್ರಾಪಂ ಅಧ್ಯಕ್ಷ ಚಂದ್ರಹಾಸ ಪಲ್ಲಿಪ್ಪಾಡಿ, ಬಡಗಬೆಳ್ಳೂರು ಗ್ರಾಪಂ ಅಧ್ಯಕ್ಷ ಪ್ರಕಾಶ್ ಆಳ್ವ ಪುಷ್ಪಾರ್ಚನೆ ಮಾಡಲಿದ್ದಾರೆ. ಕಸಾಪ ಮಾರ್ಗದರ್ಶಕ ಸರಪಾಡಿ ಅಶೋಕ ಶೆಟ್ಟಿ ಶುಭಾಶಂಸನೆಗೈಯಲಿದ್ದಾರೆ. ಮೆರವಣಿಗೆಗೆ ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಅಮ್ಮುಂಜೆ ಸೈಂಟ್ ಮೈಕಲ್ ಚರ್ಚ್ ತೆಂಕಬೆಳ್ಳೂರಿನ ಧರ್ಮಗುರು ವಂ.ಪ್ಯಾಟ್ರಿಕ್ ಸಿಕ್ವೇರ, ಬಡಕಬೈಲು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಬಹು.ಕೆ.ಇಲ್ಯಾಸ್ ಸಅದಿ ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಗಣ್ಯರಾದ ಸಂಕಪ್ಪ ಶೇಖ ಮುಳಿಯಗುತ್ತು ಮತ್ತು ಬಟ್ಲಬೆಟ್ಟು ಬಿ.ಮುಹಮ್ಮದ್ ಭಾಗವಹಿಸುವರು.ಬಳಿಕ ಅಮ್ಮುಂಜೆ ವಿನಾಯಕ ಜನಾರ್ದನ ಸದಾಶಿವ ದೇವಸ್ಥಾನದ ಆಡಳಿತ ಮೊಕ್ತೇಸರ ಡಿ.ಎ.ನಾಗೇಶ ರಾವ್ ವಸ್ತುಪ್ರದರ್ಶನ ಮಳಿಗೆ ಹಾಗೂ ಸಾಹಿತಿ ರಮೇಶ್ ಅಮ್ಮುಂಜೆ ಪುಸ್ತಕಗಳ ಮಳಿಗೆ ಉದ್ಘಾಟಿಸುವರು.

ಉದ್ಘಾಟನಾ ಕಾರ್ಯಕ್ರಮ:

ಸಂಜೆ 4.35ರಿಂದ 6.30ರವರೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮೂಡುಬಿದಿರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಸಮ್ಮೇಳನವನ್ನು ಉದ್ಘಾಟಿಸುವರು. ಸಾಹಿತಿ ಸಂಧ್ಯಾ ಶೆಣೈ ದಿಕ್ಸೂಚಿ ಭಾಷಣ ಮಾಡುವರು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ವಿಧಾನಪರಿಷತ್ತು ಸದಸ್ಯರಾದ ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಸಹಾಯಕ ಆಯುಕ್ತ ಮದನ್ ಮೋಹನ್, ತಹಸೀಲ್ದಾರ್ ಡಾ. ಸ್ಮಿತಾ ರಾಮು, ತಾಪಂ ಇಒ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ. ಎಂ.ಸುರೇಶ ನೆಗಳಗುಳಿ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳ ಆಡಳಿತ ಮೊಕ್ತೇಸರ ಡಾ. ಎ.ಮಂಜಯ್ಯ ಶೆಟ್ಟಿ, ವಿಶ್ರಾಂತ ಪ್ರಾಂಶುಪಾಲ ಗುಂಡಿಲಗುತ್ತು ಶಂಕರ ಶೆಟ್ಟಿ, ವಿಶ್ರಾಂತ ಡಿಸಿಪಿ ಜಿ.ಎ.ಬಾವ, ತಾಲೂಕು ಬಿಲ್ಲವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಅಮ್ಮುಂಜೆಗುತ್ತು ಜೀವರಾಜ ಶೆಟ್ಟಿ, ದೇವದಾಸ ಹೆಗ್ಡೆ ಮುಖ್ಯ ಅತಿಥಿಗಳಾಗಿರುವರು. ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಆಶಯ ನುಡಿಗಳನ್ನಾಡುವರು. ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಪ್ರಾಸ್ತಾವಿಕವಾಗಿ ಮಾತನಾಡುವರು. ಸಮ್ಮೇಳನಾಧ್ಯಕ್ಷರ ಪರಿಚಯವನ್ನು ಪತ್ರಕರ್ತ ಇಬ್ರಾಹಿಂ ಅಡ್ಕಸ್ಥಳ ಹಾಗೂ ಅತಿಥಿಗಳ ಪರಿಚಯವನ್ನು ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಅಬುಬಕರ್ ಅಮ್ಮುಂಜೆ ಮಾಡುವರು. ಅಮ್ಮುಂಜೆ ಇತಿಹಾಸವನ್ನು ಜನಾರ್ದನ ಅಮ್ಮುಂಜೆ ಪರಿಚಯಿಸುವರು.

ಉದ್ಘಾಟನಾ ಸಮಾರಂಭದ ಬಳಿಕ ಪತ್ರಕರ್ತ, ಕವಿ ಗಣೇಶ ಪ್ರಸಾದ ಪಾಂಡೇಲು ಅಧ್ಯಕ್ಷತೆಯಲ್ಲಿ ಬಹುಭಾಷಾ ಕವಿಗೋಷ್ಠಿ ನಡೆಯಲಿದ್ದು, ಕನ್ನಡ, ಬ್ಯಾರಿ, ತುಳು, ಹವ್ಯಕ, ಕೊಂಕಣಿ ಭಾಷೆಯಲ್ಲಿ ಕವಿಗಳು ಕವನವಾಚನ ಮಾಡಲಿದ್ದಾರೆ. ಬಳಿಕ ಕೆನರಾ ಇಂಜಿನಿಯರಿಂಗ್ ಕಾಲೇಜು ಮತ್ತು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ.

ಭಾನುವಾರ, ನವೆಂಬರ್ 13ರ ಕಾರ್ಯಕ್ರಮಗಳು:

ನ.13ರಂದು ಬೆಳಗ್ಗೆ 7.30ರಿಂದ 9.30ರವರೆಗೆ ರಾಜುಪೊಳಲಿ ಮತ್ತು ಬಳಗದಿಂದ ವಾದ್ಯಗೋಷ್ಠಿ, ಪುತ್ತೂರು ವಿಶ್ವಕಲಾ ನಿಕೇತನ ನೃತ್ಯಶಾಲೆ ವಿದ್ಯಾರ್ಥಿಗಳಿಂದ ನೃತ್ಯವೈವಿಧ್ಯ ನಡೆಯಲಿದೆ.

ಗೋಷ್ಠಿಗಳು:

ಬೆಳಗ್ಗೆ 9ರಿಂದ 10ರ ವರೆಗೆ ಸಮಾಜ, ಸಾಹಿತ್ಯ ಮತ್ತು ಶಿಕ್ಷಣ ಕುರಿತು ವಿಚಾರಗೋಷ್ಠಿ ವಿಶ್ರಾಂತ ಉಪನ್ಯಾಸಕ ಶ್ರೀಧರ ಕೆ.ಅಳಿಕೆ ಅಧ್ಯಕ್ಷತೆಯಲ್ಲಿ ನಡೆಯುವುದು. ಪ್ರಸ್ತುತ ಶಿಕ್ಷಣ ಔದ್ಯೋಗಿಕ ಸವಾಲುಗಳ ಕುರಿತು ತುಂಬೆ ಪಪೂ ಕಾಲೇಜು ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ, ಮೌಲಿಕ ಸಾಮಾಜಿಕ ಸಂಬಂಧಗಳ ಕುರಿತು ಶಿಕ್ಷಣ ಸಂಯೋಜಕಿ ಕೆ.ಸುಜಾತಾಕುಮಾರಿ, ಸಾಹಿತ್ಯ ಮತ್ತು ಯುವಜನಾಂದ ಕುರಿತು ಅನಸೂಯಾ ಈಶ್ವರಚಂದ್ರ ವಿಚಾರ ಮಂಡಿಸುವರು. ಬಳಿಕ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ.

ಬೆಳಗ್ಗೆ 10.30ರಿಂದ ರಂಗಭೂಮಿ ಪ್ರಾದೇಶಿಕ ದೃಷ್ಟಿಕೋನ ಅಂದು ಇಂದು ವಿಚಾರವಾಗಿ ವಿಚಾರಗೋಷ್ಠಿ ನಡೆಯಲಿದ್ದು, ಸಮನ್ವಯಕಾರರಾಗಿ ಹಿರಿಯ ರಂಗಕರ್ಮಿ ಮಹಾಬಲೇಶ್ವರ ಹೆಬ್ಬಾರ ನಿರ್ವಹಿಸಲಿದ್ದಾರೆ. ಹಿರಿಯ ರಂಗಕರ್ಮಿಗಳಾದ ಮಂಜು ವಿಟ್ಲ, ಮೌನೇಶ ವಿಶ್ವಕರ್ಮ ಮತ್ತು ಗೋಪಾಲ ಅಂಚನ್ ವಿಚಾರ ಪ್ರಸ್ತುತಿ ಮತ್ತು ಸಂವಾದ ನಡೆಸಲಿದ್ದಾರೆ. ಬಳಿಕ 11.15ಕ್ಕೆ ವೀರ ವೈಷ್ಣವ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದ್ದು, ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಚಾಲನೆ ನೀಡುವರು.

12.30ರಿಂದ ಕವಿಗೋಷ್ಠಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ರಾಜಮಣಿ ರಾಮಕುಂಜ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, 14 ಕವಿಗಳು ಕವನ ಪ್ರಸ್ತುತಪಡಿಸಲಿದ್ದಾರೆ. ಅಪರಾಹ್ನ 1.30ರಿಂದ ಯುವಸಂವಾದ ಗೋಷ್ಠಿ ಯುವಪೀಳಿಗೆ ಮತ್ತು ಸಾಹಿತ್ಯ ವಿಚಾರವಾಗಿ ನಡೆಯಲಿದೆ. ಎ.ಕೆ.ಕುಕ್ಕಿಲ ಸಮನ್ವಯಕಾರರಾಗಿದ್ದು, ಸಂವಾದದಲ್ಲಿ ರಾಜಾರಾಮ ವರ್ಮ, ಹರ್ಷಿತ್ ಕೊಯ್ಲ, ಮುಹಮ್ಮದ್ ಮುಅದ್ ಜಿಎಂ, ಬ್ರಿಜೇಶ್ ಅಂಚನ್ ಭಾಗವಹಿಸುವರು.

ಅಪರಾಹ್ನ 2.15ರಿಂದ ಹತ್ತು ಸಂಘ, ಸಂಸ್ಥೆಗಳಿಗೆ ಪುರಸ್ಕಾರ, ಸ್ಥಳೀಯ ಗ್ರಾಮೀಣ ಕೃಷಿಕರಾದ ಮುಂಡಪ್ಪ ಭಂಡಾರಿ ಮತ್ತು ಹೂವಯ ಪೂಜಾರಿ ಅವರಿಗೆ ಪುರಸ್ಕಾರ ನಡೆಯಲಿದೆ.ಅಪರಾಹ್ನ 2.30ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಡೆಯಲಿದ್ದು, ಪತ್ರಕರ್ತರಾದ ಉದಯಶಂಕರ ನೀರ್ಪಾಜೆ, ಸಂದೀಪ್ ಸಾಲಿಯಾನ್, ವೆಂಕಟೇಶ ಬಂಟ್ವಾಳ ಮತ್ತು ಇಮ್ತಿಯಾಜ್ ಭಾಗವಹಿಸುವರು.

ಅಪರಾಹ್ನ 3ರಿಂದ 3.45ರವರೆಗೆ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆಯಲ್ಲಿ ವಿವಿಧ ಕ್ಷೇತ್ರಗಳ 16 ಮಂದಿಯನ್ನು ಏರ್ಯಬೀಡು ಬಾಲಕೃಷ್ಣ ಹೆಗ್ಡೆ ಸನ್ಮಾನಿಸುವರು.ಬಳಿಕ ಸೌಹಾರ್ದ ನೃತ್ಯ ಸಂಗಮ ಇರಲಿದ್ದು, ನೃತ್ಯಭಜನೆ, ದಫ್ ಮತ್ತು ನೃತ್ಯರೂಪಕ ಇರಲಿದೆ.

ಅಪರಾಹ್ನ 4.10ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ವಹಿಸುವರು. ಮಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ. ನರಸಿಂಹಮೂರ್ತಿ ಆರ್. ಸಮಾರೋಪ ಭಾಷಣ ಮಾಡಲಿದ್ದಾರೆ. ಶಾಸಕರಾದ ರಾಜೇಶ್ ನಾಯ್ಕ್, ವಿಧಾನಪರಿಷತ್ತು ಸದಸ್ಯ ಮಂಜುನಾಥ ಭಂಡಾರಿ, ಬಿ.ಎಂ.ಫಾರೂಕ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರಕುಮಾರ್, ಉದ್ಯಮಿ ನಾಗೇಂದ್ರ ಬಾಳಿಗಾ, ನ್ಯಾಯವಾದಿ ಅಶ್ವನಿ ಕುಮಾರ್ ರೈ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಸಂಜೆ 6ರಿಂದ ಪೊಳಲಿ ಶ್ರೀ ವಿದ್ಯಾವಿಲಾಸ ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿ ವೈವಿಧ್ಯ, ಬಳಿಕ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದಿಂದ ಗಾನಯಾನ ನಡೆಯಲಿದೆ ಎಂದು ಅವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಸಾಪ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ, ಸ್ವಾಗತ ಸಮಿತಿ ಜತೆ ಕಾರ್ಯದರ್ಶಿ ಪ್ರಸಾದ್ ಕೊಳಂಬೆಕೋಡಿ, ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಪ್ರಮುಖರಾದ ಮಹಾಬಲೇಶ್ವರ ಹೆಬ್ಬಾರ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು