ಮಂಗಳೂರು

ಬಂಟ್ವಾಳ : ಶ್ರೀ ಒಡಿಯೂರು ರಥೋತ್ಸವದ ಅಂಗವಾಗಿ ೨೩ನೇ ತುಳು ಸಾಹಿತ್ಯ ಸಮ್ಮೇಳನ

ಬಂಟ್ವಾಳ : ತುಳುವಿಗೆ ಮೇಲ್ಸ್ತರದ ಸ್ಥಾನಮಾನವಿದ್ದು, ಪ್ರೀತಿ ವಿಶ್ವಾಸ ತುಳುವರ ಜೀವಾಳವಾಗಿದೆ. ತುಳುವರಿಂದ ತುಳು ಸಂಸ್ಕೃತಿಗೆ ಹಲವು ಕೊಡುಗೆ ಲಭಿಸಿದೆ. ಜನರಿಗೆ ತುಳು ಸಂಸ್ಕೃತಿಯನ್ನು ನೆನಪಿಸುವ ಜತೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನಗಳ ಅವಶ್ಯಕತೆ ಇದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಸೋಮವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಶ್ರೀ ಒಡಿಯೂರು ರಥೋತ್ಸವದ ಅಂಗವಾಗಿ ನಡೆದ ೨೩ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದರು.

ರಾಸಾಯನಿಕಗಳನ್ನು ಮಣ್ಣಿಗೆ ಸೇರಿಸಿ ಮಣ್ಣಿನ ಸಾರ ಕಡಿಮೆ ಮಾಡುವ ಜತೆಗೆ ಆಹಾರ ವಿಷವಾಗಿದೆ. ಅಜ್ಜಿ ಕಥೆಯಲ್ಲಿ ಜೀವನ ಸಾರವನ್ನು ನೀಡುವ ನೈತಿಕ ಮೌಲ್ಯಗಳು ತುಂಬಿದೆ. ಭಾಷೆ – ಸಂಸ್ಕೃತಿ ಒಂದು ನಾಣ್ಯದ ಎರಡು ಮುಖಗಳಾಗಿದೆ. ಹಿಂದಿನ ಆಚಾರ ವಿಚಾರಗಳನ್ನು ಉಳಿಸುವ ನಿಟ್ಟಿನಲ್ಲಿ ಯುವ ಶಕ್ತಿ ಪ್ರಯತ್ನಿಸಬೇಕು. ಮನೆಯಲ್ಲಿ ಬದಲಾವಣೆಯಾದಾಗ ದೇಶ ಬದಲಾಗಲು ಸಾಧ್ಯ ಎಂದು ತಿಳಿಸಿದರು.

ತುಳು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾದ ಹಿರಿಯ ಸಾಹಿತಿ ಡಾ. ವಸಂತಕುಮಾರ ಪೆರ್ಲ ಮಾತನಾಡಿ ನೆಲ – ಜಲ ಸಂರಕ್ಷಣೆಯ ವಿಚಾರದಲ್ಲಿ ನಮ್ಮ ಹೊಣೆಯಿದ್ದು, ಪರಿಸರವನ್ನು ಉಳಿಸಿ ಮುಂದಿನ ಜನಾಂಗಕ್ಕೆ ನೀಡುವ ಕಾರ್ಯವಾಗಬೇಕಾಗಿದೆ. ಕೃಷಿ ಪ್ರಧಾನವಾದ ತುಳುನಾಡು ಕೈಗಾರಿಕೀಕರಣದತ್ತ ಹೆಚ್ಚು ವಾಲುತ್ತಿದೆ. ಅಭಿವೃದ್ಧಿಯ ಜತೆಗೆ ಕೃಷಿ – ಋಷಿ ಸಂಸ್ಕೃತಿಯೊಂದಿಗೆ ತುಳುವರು ಬೆಳೆಯಬೇಕು ಎಂದು ತಿಳಿಸಿದರು.

ಸಾದ್ವಿ ಮಾತಾನಂದಮಯೀ ದಿವ್ಯ ಸಾನಿಧ್ಯವಹಿಸಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಬೇಲಾಡಿ ವಿಠಲ ಶೆಟ್ಟಿ ಅವರು ಒಡಿಯೂರು ಶ್ರೀಗಳು ತುಳುಲಿಪಿಯ ಕೈಬರಹದ ಈಶಾವಾಸ್ಯೋಪನಿಷತ್ ಬಿಡುಗಡೆಮಾಡಿದರು.

ಅಖಿಲ ಭಾರತ ತುಳು ಕೂಟದ ಅಧ್ಯಕ್ಷ ಎ. ಸಿ. ಭಂಡಾರಿ, ಬೆಂಗಳೂರು ತುಳುವರ ಚಾವಡಿ ಗೌರವಾಧ್ಯಕ್ಷ ಪುರುಷೋತ್ತಮ ಚೇಂಡ್ಲ, ದ. ಕ. ಜಿಲ್ಲಾ ಕ್ಯಾಟರಿಂಗ್ ಎಸೋಸಿಯೇಶನ್ ಅಧ್ಯಕ್ಷ ರಾಜ್ ಗೋಪಾಲ ರೈ, ಪೂರ್ಣಿಮಾ ಉಪಸ್ಥಿತರಿದ್ದರು.

ರೇಣುಕಾ ಎಸ್. ರೈ ಒಡಿಯೂರು ಪ್ರಾರ್ಥಿಸಿದರು. ಒಡಿಯೂರು ತುಳು ಕೂಡದ ಅಧ್ಯಕ್ಷ ಯಶವಂತ ವಿಟ್ಲ ಸ್ವಾಗತಿಸಿದರು. ಜಯಪ್ರಕಶ್ ಶೆಟ್ಟಿ ಎ. ಅಧ್ಯಕ್ಷರ ಪರಿಚಯ ಮಾಡಿದರು. ದೇವಿಪ್ರಸಾದ್ ಶೆಟ್ಟಿ ಬೆಜ್ಜ ವಂದಿಸಿದರು. ಲೋಕೇಶ್ ಶೆಟ್ಟಿ ಬಾಕ್ರಬೈಲು ಕಾರ್ಯಕ್ರಮ ನಿರೂಪಿಸಿದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago