Categories: ಮಂಗಳೂರು

ಬಂಟ್ವಾಳ: ಬಿಜೆಪಿ ಭಾವನಾತ್ಮಕತೆಯನ್ನು ಕೆರಳಿಸುವ ಪ್ರಯತ್ನ ಮಾಡುತ್ತಿದೆ

ಬಂಟ್ವಾಳ: ಕಾಂಗ್ರೆಸ್ ದೇಶದ ಜನರ ಬದುಕಿನ ಪ್ರಗತಿಯ ಬಗ್ಗೆ ಚಿಂತನೆ ಮಾಡಿದರೆ, ಬಿಜೆಪಿ ಭಾವನಾತ್ಮಕತೆಯನ್ನು ಕೆರಳಿಸುವ ಪ್ರಯತ್ನ ಮಾಡುತ್ತಿದೆ. ಭ್ರಷ್ಟಾಚಾರವೆಸಗಿ ಅದನ್ನೇ ವೈಭವೀಕರಣ ಮಾಡುತ್ತಿರುವ ಬಿಜೆಪಿಯವರು ಬೇರೆಯವರಿಗೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ.

ಶೇ.30ರಷ್ಟು ಕೆಲಸದಲ್ಲಿ ಶೇ.40ರಷ್ಟು ಕಮಿಷನ್ ಪಡೆದದ್ದೇ ಪುತ್ತೂರು ಸ್ಮಾರ್ಟ್ ಸಿಟಿಯ ಸಾಧನೆಯಾಗಿದೆ. ಹಿಂದುತ್ವದಲ್ಲಿ ಮಹಿಳೆಯರ ಸ್ಥಾನಮಾನ ಏನೆಂಬುದನ್ನು ತಿಳಿಸುವ ಕಾರ್ಯವಾಗಬೇಕು. ಸುಳ್ಳನ್ನೇ ಮನೆ ದೇವರು ಮಾಡಿಕೊಂಡವರು, ತಿಮಿಂಗಿಲವನ್ನೇ ನುಂಗುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ಹೇಳಿದರು.

ಅವರು ಬುಧವಾರ ಸ್ಟೈಲ್ ಪಾರ್ಕ್ ಮೈದಾನದಲ್ಲಿ ವಿಟ್ಲ – ಉಪ್ಪಿನಂಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಧಾನ ಪರಿಷತ್ತು ಸದಸ್ಯ ಡಾ. ಮಂಜುನಾಥ ಭಂಡಾರಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರಾವಳಿಯಲ್ಲಿ ಐಟಿ ಹಾಗೂ ಗಾರ್ಮೆಂಟ್ ಇಂಡಸ್ಟ್ರೀ ಪಾರ್ಕ್ ಸ್ಥಾಪನೆಯ ಮೂಲಕ 1ಲಕ್ಷ ಉದ್ಯೋಗ ಸೃಷ್ಟಿಸುವ ಯೋಜನೆ ಹಾಕಲಾಗಿದೆ. ಕರಾವಳಿಯ ಅಭಿವೃದ್ಧಿಯ ಮೂಲಕ ಪ್ರವಾಸೋದ್ಯಮದ ಬೆಳವಣಿಗೆಗೆ ಯೋಜನೆ ಹಾಕಲಾಗಿದೆ. ಭಾವನಾತ್ಮಕತೆಗೆ ಮತ ಹೋಗದೆ, ನೈಜತೆಯನ್ನು ಜನರಿಗೆ ತಿಳಿಸುವ ಕಾರ್ಯ ನಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವಹಿಸಿದ್ದರು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆ.ಪಿ.ಸಿ.ಸಿ. ಸದಸ್ಯರಾದ ದಿನೇಶ್ ಅಡ್ಪಂಗಾಯ, ಕೃಪಾ ಅಮರ್ ಆಳ್ವ, ಪ್ರಮುಖರಾದ ಸತೀಶ್ ಕೆಡೆಂಜ, ಚಂದ್ರಹಾಸ ಶೆಟ್ಟಿ, ಅಶೋಕ್ ಕುಮಾರ್ ರೈ, ದಿವ್ಯ ಪ್ರಭಾ ಚಿಲ್ತಡ್ಕ, ಪ್ರಹ್ಲಾದ ಬೆಳ್ಳಿಪ್ಪಾಡಿ, ಜಿಲ್ಲಾ ಸೇವಾ ದಳದ ಅಧ್ಯಕ್ಷ ಜೋಕಿಮ್ ಸಿಕ್ವೇರಾ ಉಪಸ್ಥಿತರಿದ್ದರು.
ವಿಟ್ಲ ಉಪ್ಪಿನಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ ಕೆ. ಬಿ. ಸ್ವಾಗತಿಸಿದರು. ಪಟ್ಟಣ ಪಂಚಾಯಿತಿ ಸದಸ್ಯ ವಿ.ಕೆ.ಎಂ. ಅಶ್ರಫ್ ವಂದಿಸಿದರು. ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

3 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

3 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

3 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

4 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

4 hours ago