News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ: ಜನರು ನೀಡಿದ ಪ್ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ – ರಾಜೇಶ್ ನಾಯ್ಕ್

The love given by people can never be forgotten- Rajesh Naik
Photo Credit : By Author

ಬಂಟ್ವಾಳ: ಜನರು ನೀಡಿದ ಅಧಿಕಾರದ ಮೂಲಕ ಶಾಸಕನಾಗಿ ಪಾದಯಾತ್ರೆಯ ಮಾಡಿದ್ದು, ಜನರು ನೀಡಿದ ಪ್ರೀತಿಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕ್ಷೇತ್ರದ ಜನರ ಗೌರವಕ್ಕೆ ಯಾವುದೇ ರೀತಿಯ ಧಕ್ಕೆ ತರದೆ ಕಾರ್ಯನಿರ್ವಹಿಸಿದ ತೃಪ್ತಿ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಅವರು ಬಂಟ್ವಾಳ ಬಿಜೆಪಿ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನೇತೃತ್ವದಲ್ಲಿ ನಡೆಯುತ್ತಿರುವ ಗ್ರಾಮ ವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆಯಲ್ಲಿ ನಂದಾವರ ದೇವಸ್ಥಾನದಿಂದ ವಿಟ್ಲಪಡ್ನೂರು ಕಾಪುಮಜಲು ದೈವಸ್ಥಾನದವರೆಗೆ ನಡೆದ ೨ನೇ ದಿನದ ಪಾದಯಾತ್ರೆಯ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಅಭಿವೃದ್ಧಿಯ ಕುರಿತು ಯಾವುದೇ ಸುಳ್ಳು ಹೇಳುವಂತಿಲ್ಲ‌‌. ಜನರು ಕೂಡ ದಾಖಲೆಗಳನ್ನು ಪರಿಶೀಲಿಸಿ ತಿಳಿದುಕೊಳ್ಳಬಹುದು. ಅಭಿವೃದ್ಧಿ ನಿರಂತರ ಹರಿಯುವ ನೀರಾಗಿದ್ದು, ಇನ್ನೂ ಮುಂದೆಯೂ ಸಾಕಷ್ಟು ಬೇಡಿಕೆಗಳು ಬರುತ್ತದೆ. ಪಕ್ಷದ ಕಾರ್ಯಕರ್ತರು, ನಾಯಕರ‌ ವಿಶ್ವಾಸ ಪಡೆದು ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದೇವೆ. ಪಕ್ಷವನ್ನು ಗಟ್ಟಿಗೊಳಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಪ್ರಾರಂಭದಲ್ಲಿ ಸೋತರೂ ರಾಜೇಶ್ ನಾಯ್ಕ್ ಅವರು ಶಾಸಕರ ರೀತಿಯಲ್ಲೇ ಜನರ ಸೇವೆ ಮಾಡಿದ ಪರಿಣಾಮ ಮತ್ತೆ ಗೆದ್ದು ಬಂದಿದ್ದಾರೆ. ಕಲ್ಲಡ್ಕ ಶಾಲೆಯ ಮಕ್ಕಳ ಅನ್ನ ಕಸಿಯುವ ಕಾರ್ಯ, ನಿರಂತರ ಕರ್ಫ್ಯೂ, ರಕ್ತ ಚೆಲ್ಲುವ ಪರಿಸ್ಥಿತಿಗೆ ತಿಲಾಂಜಲಿ ಹಾಕಿರುವ ರಾಜೇಶ್ ನಾಯ್ಕ್ ಅವರು ನವ ಬಂಟ್ವಾಳ ನಿರ್ಮಾಣ ಕಾರ್ಯ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಏರಿದ ಪರಿಣಾಮವೇ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದು, ಆದರೆ ಕಾಂಗ್ರೆಸ್ ಹಿಂದೂ ಧರ್ಮದ ಮೇಲೆ ದಬ್ಬಾಳಿಕೆ ಮಾಡುತ್ತಾ ಬಂದಿದೆ ಎಂದರು.

ಪಾದಯಾತ್ರೆಯ ಸಂಚಾಲಕ ಬಿ.ದೇವದಾಸ್ ಶೆಟ್ಟಿ ಅವರು ಪಾದಯಾತ್ರೆ ಸಾಗಿ ಬಂದ ಗ್ರಾಮಗಳ ಅನುದಾನದ ವಿವರ ನೀಡಿದರು. ಸಹಸಂಚಾಲಕ ಮಾಧವ ಮಾವೆ ಮಾತನಾಡಿ, ನವಬಂಟ್ವಾಳ ನಿರ್ಮಾಣದ ಜತೆಗೆ ಕ್ಷೇತಕ್ಕೆ ಹೈಟೆಕ್ ಸ್ಪರ್ಶ ನೀಡಿದ ಕೀರ್ತಿ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಸಲ್ಲುತ್ತದೆ ಎಂದರು.

ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ವಿಟ್ಲಪಡ್ನೂರು ಗ್ರಾ.ಪಂ.ಅಧ್ಯಕ್ಷೆ ರೇಷ್ಮಾಶಂಕರಿ, ನಗರ ನೀರು ಸರಬರಾಜು, ಒಳಚರಂಡಿ ನಿಗಮದ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ವಿಟ್ಲಪಡ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸನತ್ ಕುಮಾರ್ ರೈ, ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ಪಾದಯಾತ್ರೆಯ ಸಹಸಂಚಾಲಕರಾದ ಮಾಧವ ಮಾವೆ, ಸುದರ್ಶನ್ ಬಜ ಉಪಸ್ಥಿತರಿದ್ದರು. ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು