ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಸೆ.೯ರ ತಡರಾತ್ರಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದ ಬಗ್ಗೆ ವರದಿಯಾಗಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಮಧ್ಯೆ ಬುಡೋಳಿ ಸಮೀಪ ಅಪಘಾತ ಸಂಭವಿಸಿದೆ.
ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು ಇಬ್ಬರು ಗಂಭೀರ ಗಾಯಗೊಂಡಿದ್ದು, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ತಕ್ಷಣವೇ ಕಾರ್ಯಪ್ರವರ್ತರಾದ ಸ್ಥಳೀಯರು ಸೋಷಿಯಲ್ ಇಕ್ವ ಮಾಣಿಯ ಆಂಬ್ಯುಲೆನ್ಸ್ ನ ಸದಸ್ಯರ ಸಹಕಾರದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…