News Karnataka Kannada
Friday, May 03 2024
ಮಂಗಳೂರು

ಬಂಟ್ವಾಳ| ಅಧಿಕಾರಿಗಳ ವರ್ಗಾವಣೆ ರಾಜಕೀಯ ಪ್ರೇರಿತ: ಬಿ.ರಮಾನಾಥ ರೈ

Transfer of officers politically motivated: B Ramanath Rai
Photo Credit :
ಬಂಟ್ವಾಳ : ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ  ಆರೋಪಿಸಿದ್ದಾರೆ.
ಬಿ.ಸಿ.ರೋಡ್ ನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಇದೊಂದು ರಾಜಕೀಯ ಪ್ರೇರಿತ ವರ್ಗಾವಣೆಯಾಗಿದ್ದು, ಒಳ್ಳೆಯ ಕೆಲಸ ಮಾಡುತ್ತಿದ್ದ ಅಧಿಕಾರಿಯನ್ನು ಹಠಾತ್ತಾಗಿ ವರ್ಗಾವಣೆ ಮಾಡಿದ್ದಾರೆ, ನಿರಂತರವಾಗಿ ಅಕ್ರಮ ಮರಳುಗಾರಿಕೆ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಅನಂತಾಡಿಯಲ್ಲಿ ಗಣಿಗಾರಿಕೆಯಿಂದ ಗುಹಾತೀರ್ಥಕ್ಕೆ ತೊಂದರೆ ಆಗುತ್ತಿದೆ ಎಂಬ ಆರೋಪಿಸಿ ಪ್ರತಿಭಟನೆಯನ್ನು ಮಾಡಿದ್ದೆವು ಎಂದು ನೆನಪಿಸಿದ ಅವರು, ಬಿಜೆಪಿಯವರು ಬೇರೆಯವರಿಗೆ ಬುದ್ಧಿವಾದ ಹೇಳುತ್ತಾರೆ, ಆದರೆ ಅವರಿಗೆ ಬುದ್ಧಿ ಹೇಳಬೇಕಾದವರು ಜನರು ಎಂದರು.
ಒಂದು ಲೋಡ್ ಮರಳಿಗೆ 15 ಸಾವಿರ ರೂ ಕೊಡಬೇಕಾದ ಪರಿಸ್ಥಿತಿ ಇದೆ, ಮನೆ ಕಟ್ಟುವವರು ಸಂಕಷ್ಟ ಪಡುತ್ತಿದ್ದಾರೆ. ತಾಲೂಕಿನ ಒಂದು ಕಡೆ ಪರವಾನಗಿ ತೆಗೆದುಕೊಂಡವರು ಎಲ್ಲ ಕಡೆಗಳಲ್ಲೂ ಮರಳುಗಾರಿಕೆ ಮಾಡುತ್ತಾರೆ ಎಂದು ರೈ ಆರೋಪಿಸಿದರು.
ಜೂಜು ಅಡ್ಡೆಯ ಬಳಿಯೇ ಕೊಲೆ ಯತ್ನ ಪ್ರಕರಣ, ಹಲ್ಲೆಗಳು ನಡೆದದ್ದು ವರದಿಯಾಗಿವೆ. ಹೆಣ್ಣುಮಕ್ಕಳ ಕರಿಮಣಿ ಅಡವಿಟ್ಟು ಜುಗಾರಿ ದಂಧೆಯಲ್ಲಿ ತೊಡಗಿಸಿಕೊಂಡವರಿದ್ದಾರೆ. ಮರಳುಗಾರಿಕೆಯ ಪಕ್ಕದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ, ಈ ಭಾಗದ ಬೆಳ್ತಂಗಡಿ ಮತ್ತು ಬಂಟ್ವಾಳದ ಇಬ್ಬರೂ ಶಾಸಕರ ಬೆಂಬಲ ಇದೆ ಎಂದು ನಾನು ನೇರವಾಗಿ ಆರೋಪಿಸುತ್ತೇನೆ ಎಂದು ರೈ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ ಬೋಳಂತೂರು, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಮುರಳೀಧರ ರೈ ಮಠಂತಬೆಟ್ಟು, ಪ್ರಸಾದ್ ಕೌಶಲ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಮಾನಾಥ ರೈ, ಮಹಮ್ಮದ್ ಬಡಗನ್ನೂರು, ಪದ್ಮನಾಭ ರೈ ಮೊದಲಾದವರು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು