Categories: ಮಂಗಳೂರು

ಬಂಟ್ವಾಳ :ತುಳು ನಾಟಕ ಕಲಾವಿದರ ಒಕ್ಕೂಟ ಬಂಟ್ವಾಳ ತಾಲೂಕು ಘಟಕ ತುಳು ನಾಟಕೊತ್ಸವ

ಬಂಟ್ವಾಳ : ತುಳು ನಾಟಕ ಕಲಾವಿದರ ಒಕ್ಕೂಟದ ಬಂಟ್ವಾಳ ತಾಲೂಕು ಘಟಕದ ವತಿಯಿಂದ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಒಂದು ವಾರ ನಡೆದ ವರೆಗೆ ತುಳು ನಾಟಕ ಸ್ಪರ್ಧೆಯಲ್ಲಿ ಪುಂಜಾಲಕಟ್ಟೆ ತಾಂಬೂಲ ಕಲಾವಿದೆರ್ ತಂಡದ ಪರಿಮಳ ಕಾಲೊನಿ ನಾಟಕ ಪ್ರಥಮ ಪ್ರಶಸ್ತಿ ಪಡೆದಿದೆ.

ಅಭಿನಯ ಕಲಾವಿದೆರ್ ಕುಡ್ತಮುಗೇರ್ ತಂಡದ ನನ ದಾದ ಒರಿಂಡ್ ದ್ವಿತೀಯ, ಓಂ ಶ್ರೀ ಕಲಾವಿದೆರ್ ಬಿ.ಸಿ.ರೋಡ್ ತಂಡದ ಅಂದ್ಂಡ ಅಂದ್ ಪನ್ಲೆ ತೃತೀಯ ಸ್ಥಾನ ಪಡೆದಿದೆ. ಶುಕ್ರವಾರ ಸಂಜೆ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಸಮಾರೋಪದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ಅಧ್ಯಕ್ಷ ಕಿಶೋರ್ ಡಿ.ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳು ಭಾಷೆ, ಸಂಸ್ಕೃತಿಯ ಉಳಿವಿಗೆ ತು ಳು ನಾಟಕಗಳ ಕೊಡುಗೆ ಅಪಾರ. ರಂಗ ಭೂಮಿ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ ಎಂದರು. ಬಂಟ್ವಾಳ ಸ್ವರ್ಣೋದ್ಯಮಿ ಬಿ.ನಾಗೇಂದ್ರ ಬಾಳಿಗ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಒಕ್ಕೂಟದ ಬಂಟ್ವಾಳ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಸಮಾರೋಪ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಬಿ.ಸಿ.ರೋಡ್ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ. ತುಕಾರಾಮ ಪೂಜಾರಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸಂಚಾಲಕ ಪಟ್ಲ ಸತೀಶ್ ಶೆಟ್ಟಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸರಪಾಡಿ ಅಶೋಕ ಶೆಟ್ಟಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯರಾಮ ಆಚಾರ್ಯ, ದ. ಕ. ಜಿಲ್ಲಾ ಸಂಸ್ಕಾರ ಭಾರತಿ ಅಧ್ಯಕ್ಷ ತಾರಾನಾಥ ಕೊಟ್ಟಾರಿ,ಚಲನಚಿತ್ರ ನಟ ವಿನೀತ್ ವಿ.ಜೆ., ತುಳುಕೂಟ ಬಂಟ್ವಾಳ ಅಧ್ಯಕ್ಷ ಸುದರ್ಶನ ಜೈನ್, ಬಂಟ್ವಾಳ ತಾಲೂಕು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಮಾಕ್ಸಿಂ ಸಿಕ್ವೇರಾ,ಕೋಶಾಽಕಾರಿ ಐವಾನ್ ಡಿಸೋಜ, ಸಮಿತಿ ಸಹ ಸಂಚಾಲಕ ಪದ್ಮನಾಭ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ ಶೆಟ್ಟಿ, ವಿನೀತ್ ವಿಜೆ, ತೀರ್ಪುಗಾರರಾದ ರಾಮಚಂದ್ರ ರಾವ್, ಸದಾಶಿವಗಿರಿ ಕಲ್ಲಡ್ಕ, ಮಧು ಬಂಗೇರ ಕಲ್ಲಡ್ಕ ಅವರನ್ನು ಸಮ್ಮಾನಿಸಲಾಯಿತು. ದಿವಾಕರ ದಾಸ್ ಸ್ವಾಗತಿಸಿದರು. ಮಂಜು ವಿಟ್ಲ ವಂದಿಸಿದರು. ರಾಮಚಂದ್ರ ರಾವ್ ಫಲಿತಾಂಶ ವಿವರ ನೀಡಿದರು. ಕಲಾವಿದ ಎಚ್ಕೇ ನಯನಾಡು ಕಾರ್ಯಕ್ರಮ ನಿರ್ವಹಿಸಿದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

6 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

7 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

7 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

7 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

7 hours ago