Categories: ಮಂಗಳೂರು

ಬಂಟ್ವಾಳ: ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಕಸ ಸಂಗ್ರಹಣೆ- ಯು.ಟಿ.ಖಾದರ್ ಭೇಟಿ

ಬಂಟ್ವಾಳ: ಬಂಟ್ವಾಳ ಪುರಸಭೆಯು ಸಜೀಪನಡು ಕಂಚಿನಡ್ಕಪದವುನಲ್ಲಿರುವ ತನ್ನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಕಸವನ್ನು ರಾಶಿ ಹಾಕಿ ಪರಿಸರ ಹಾನಿಯ ಜತೆಗೆ ಸ್ಥಳೀಯ ಜನತೆಗೆ ತೊಂದರೆ ನೀಡುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ಕ್ಷೇತ್ರದ ಶಾಸಕ, ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರು ೨ನೇ ದಿನ ಘಟಕಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಅವ್ಯವಸ್ಥೆ ಉಂಟಾಗಿ ಗ್ರಾಮಸ್ಥರಿಗೆ ತೊಂದರೆಯಾಗಿದೆ. ಪುರಸಭೆಯವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಹೀಗಾಗಿ ಮುಂದೆ ಜು. ೩ರೊಳಗೆ ಇಲ್ಲಿನ ಬೃಹತ್ ಹೊಂಡಗಳಲ್ಲಿ ತುಂಬಿರುವ ಕಲುಷಿತ ನೀರನ್ನು ಲಿಫ್ಟ್ ಮಾಡಿ ಶುಚಿಗೊಳಿಸಬೇಕು, ಹಸಿ ಕಸದ ಜತೆಗೆ ಅವೈಜ್ಞನಿಕವಾಗಿ ಸುರಿದ ಒಣ ಕಸವನ್ನೂ ಬೇರೆಡೆಗೆ ತೆಗೆದುಕೊಂಡು ಹೋಗಬೇಕು. ಅದರ ಬಳಿಕವೇ ಮತ್ತೆ ಒಣ ಕಸವನ್ನು ಹಾಕುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಉಳ್ಳಾಲ ತಹಶೀಲ್ದಾರ್ ಗುರುಪ್ರಸಾದ್, ಪುರಸಭಾ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಪರಿಸರ ಎಂಜಿನಿಯರ್ ರಾಮಚಂದ್ರ, ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ, ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್, ಗ್ರಾಮಕರಣಿಕ ಜಗದೀಶ್ ಶೆಟ್ಟಿ, ಸಜೀಪನಡು ಗ್ರಾ.ಪಂ.ಮಾಜಿ ಅಧ್ಯಕ್ಷ ನಾಸೀರ್ ಸಜೀಪ, ಗ್ರಾ.ಪಂ.ಸದಸ್ಯ ಅಬೂಬಕ್ಕರ್ ಸಜೀಪ, ಇರಾ ಗ್ರಾ.ಪಂ.ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಗ್ರಾ.ಪಂ.ಸದಸ್ಯರು, ಸ್ಥಳೀಯರು, ಮೊದಲಾದವರು ಉಪಸ್ಥಿತರಿದ್ದರು.

Ashika S

Recent Posts

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

7 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

24 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

25 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

43 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

53 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

59 mins ago