News Karnataka Kannada
Sunday, May 05 2024
ಮಂಗಳೂರು

ಬಂಟ್ವಾಳ: ಕಣಜದ ಹುಳುಗಳ ದಾಳಿಯಿಂದ ಮಹಿಳೆ ಸಾವು

Five die in Thane hospital in a single day
Photo Credit : Pixabay

ಬಂಟ್ವಾಳ: ಕೂಲಿ ಕೆಲಸ ಮಾಡಿ ಹಿಂತಿರುಗುತ್ತಿದ್ದಾಗ ಕಣಜದ ಹುಳು ದಾಳಿಯಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಮೀನಾಕ್ಷಿ ಎಂದು ತಿಳಿದು ಬಂದಿದೆ. ಮೀನಾಕ್ಷಿಯವರು ಕೂಲಿ ಕೆಲಸ ಮಾಡಿಕೊಂಡಿದ್ದು,ಎರಡು ದಿನಗಳ ಹಿಂದೆ ಮಧ್ಯಾಹ್ನ ಕೆಲಸಬಿಟ್ಟು ಮಹಾಬಲ ಆಳ್ವರವರ ಜಮೀನಿನ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ದಾರಿಬದಿಯಲ್ಲಿ ಇದ್ದ ಒಣ ಕಟ್ಟಿಗೆಯೊಂದನ್ನು ಎಳೆದಿದ್ದಾರೆ.

ಆಗ ಅದರಲ್ಲಿದ್ದ ಕಣಜದ ಹುಳುಗಳು ಕಚ್ಚಿದ್ದು, ತಕ್ಷಣ ಅಲ್ಲಿಂದ ಬೊಬ್ಬೆ ಹಾಕಿಕೊಂಡು ಮಹಾಬಲ ಆಳ್ವರವರ ಮನೆಗೆ ಓಡಿಹೋಗಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು