News Karnataka Kannada
Sunday, April 14 2024
Cricket
ಮಂಗಳೂರು

ಬಂಟ್ವಾಳ: ಸೈನೇಡ್ ಸೇವಿಸಿ ಯುವಕ ಆತ್ಮಹತ್ಯೆ

Bantwal: Youth commits suicide by consuming cyanide
Photo Credit : News Kannada

ಬಂಟ್ವಾಳ: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆಗೈದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ ಮೃತಪಟ್ಟವರು.

ಸ್ವರ್ಣ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗಣೇಶ್ ಅವರ ಮೂವರು ಮಕ್ಕಳಲ್ಲಿ ಹಿರಿಯವನಾಗಿದ್ದ ರೂಪೇಶ್ ವಿವಾಹಿತನಾಗಿದ್ದು, ಪತ್ನಿ, ಪುಟ್ಟ ಮಗುವನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು