Categories: ಮಂಗಳೂರು

ಬಿಸಿರೋಡಿನಲ್ಲಿ ರೈಲ್ವೆ ಮೇಲ್ಸೆತುವೆಯ ಅಪಾಯಕಾರಿ ಭಾಗಕ್ಕೆ ತಡೆಬೇಲಿ

ಬಂಟ್ವಾಳ: ಬಿಸಿರೋಡಿನಲ್ಲಿ ರೈಲ್ವೆ ಮೇಲ್ಸೆತುವೆಯ ಅಪಾಯಕಾರಿ ಭಾಗಕ್ಕೆ ತಡೆಬೇಲಿ ಹಾಕುವ ಕಾಮಗಾರಿ ನಡೆಯುತ್ತಿದೆ.

ಮಂಗಳೂರು – ಬೆಂಗಳೂರು ರೈಲ್ವೆ ಮಾರ್ಗದ ಮಧ್ಯೆ ಬಿಸಿರೋಡಿನ ಸಿ.ಟಿ.ಯ ಭಾಗದಲ್ಲಿ ಹಾದುಹೋಗುವ ರೈಲ್ವೆ ಹಳಿಯ ಕ್ರಾಸಿಂಗ್ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲ್ಸೆತುವೆ ನಿರ್ಮಾಣ ಮಾಡಲಾಗಿತ್ತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಸಿರೋಡಿನ ಪ್ಲೈ ಓವರ್ ಮತ್ತು ಸರ್ವೀಸ್ ರಸ್ತೆ ಸಂಪರ್ಕವನ್ನು ಹೊಂದಿರುವ ಹಳೆಯ ರೈಲ್ವೆ ಮೇಲ್ಸೆತುವೆಯ ಎರಡು ಭಾಗ ಅಪಾಯಕಾರಿಯಾಗಿದ್ದು, ಇದರಿಂದ ನಡೆಯುವ ಅಪಘಾತವನ್ನು ತಡೆಯುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಸುರಕ್ಷತಾ ತಡೆ ಬೇಲಿಯನ್ನು ಹಾಕುತ್ತಿದೆ.

ಇನ್ನೊಂದು ಮಾಹಿತಿ ಪ್ರಕಾರ ವಿದ್ಯುತ್ ಚಾಲಿತ ರೈಲು ಓಡಾಡುವ ದೃಷ್ಟಿಯಿಂದ ರೈಲ್ವೆ ಹಳಿಯಲ್ಲಿ ವಿದ್ಯುತ್ ಕಂಬಗಳನ್ನು ಹಾಕಿ ಲೈನ್ ಕಾಮಗಾರಿ ಮುಗಿದಿದೆ. ಹಾಗಾಗಿ ಅಪಾಯಕಾರಿ ವಿದ್ಯುತ್ ಗೆ ಯಾವುದೇ ದುರ್ಘಟನೆ ನಡೆಯಬಾರದು ಎಂಬ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವನ್ನು ಇಲಾಖೆ ವಹಿಸಿಕೊಂಡು ಈ ಮೆಟಲ್ ತಡೆಬೇಲಿಯನ್ನು ಹಾಕಲಾಗುತ್ತಿದೆ ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ಅಪಾಯಕಾರಿ ರೈಲ್ವೆ ಮೇಲ್ಸೆತುವೆಯಿಂದ ಕೆಳಕ್ಕೆ ಯಾವುದೇ ವಸ್ತುಗಳಾಗಲಿ, ಮನುಷ್ಯ, ಪ್ರಾಣಿ, ಪಕ್ಷಿ ಹಾಗೂ ಇತರ ಜೀವಗಳು ಬಿದ್ದು ಬಲಿಯಾಗಬಾರದು ಎಂದು ಮುಂಜಾಗ್ರತಾ ಕ್ರಮವನ್ನು ಇಲಾಖೆ ತಡವಾಗಿ ಕೈಗೊಂಡಿದೆ.

Gayathri SG

Recent Posts

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

16 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

28 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

55 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

1 hour ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

1 hour ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

2 hours ago