ಸುರತ್ಕಲ್: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದು ಹಿಂದಿನ ಶಾಸಕ ಮೊಯಿದೀನ್ ಬಾವಾ ಅವರ ಅವಧಿಯಲ್ಲಿ. ಅವರಿಗೆ ಕಾಂಗ್ರೆಸ್ ಪಕ್ಷದ ನಾಯಕರು ಮೋಸದಿಂದ ಟಿಕೆಟ್ ಸಿಗುವುದನ್ನು ತಪ್ಪಿಸಿದರು. ನಾವು ಅವರಲ್ಲಿ ಧೈರ್ಯ ತುಂಬಿ ಜೆಡಿಎಸ್ ನಿಂದ ಟಿಕೆಟ್ ನೀಡಿದ್ದೇವೆ. ಬಾವಾ ಮಾಡಿರುವ ಅಭಿವೃದ್ಧಿ, ತ್ಯಾಗಕ್ಕೆ ಈ ಬಾರಿ ಮತದಾರರು ಕೈ ಹಿಡಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೆಡಿಎಸ್ ಸರಕಾರದ ಅವಧಿಯಲ್ಲಿ ಮಹಿಳೆಯರಿಗೆ ಸ್ವಾವಲಂಬನೆ ಸಿಕ್ಕಿತು, ರೈತರ ಸಾಲ ಮನ್ನಾ ಆಗಿ ನೆಮ್ಮದಿಯ ಜೀವನ ಸಿಕ್ಕಿತು, ರಾಜ್ಯದಲ್ಲಿ ಶಾಂತಿ ನೆಮ್ಮದಿಯಿಂದ ಜನರು ಜೀವಿಸುವಂತಾಯಿತು. ಬಾವಾ ಅವರು ಮೂರನೇ ನಂಬರ್ ನಲ್ಲಿ ಇದ್ದಾರೆ. ಭತ್ತದ ತೆನೆ ಹೊತ್ತ ಅನ್ನಪೂರ್ಣೇಶ್ವರಿಯ ಚಿಹ್ನೆ ಅವರದ್ದಾಗಿದೆ. ಮೇ 10ರಂದು ಸಂಜೆ 5 ಗಂಟೆಯ ವರೆಗೆ ಕಾಲಾವಕಾಶ ಇದೆ, ನಾನು ಕೈಮುಗಿದು ಬೇಡಿಕೊಳ್ಳುತ್ತಿದ್ದೇನೆ. ಅವರಿಗೆ ಮತ ಕೊಟ್ಟು ಹರಸಿ. ಜನರಿಗೆ ಬಾವಾ ಮೇಲೆ ವಿಶ್ವಾಸವಿದ್ದು ಅವರು ಮತ ಕೊಟ್ಟು ಗೆಲ್ಲಿಸಲಿದ್ದಾರೆ” ಎಂದರು.
ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳಾದ ಮೊಯಿದೀನ್ ಬಾವಾ, ಡಾ.ಅಮರಶ್ರೀ, ಸುಮತಿ ಹೆಗ್ಡೆ, ಯುವಜನತಾದಳದ ಅಕ್ಷಿತ್ ಸುವರ್ಣ, ಜಿಲ್ಲಾಧ್ಯಕ್ಷ ಎಂಬಿ ಸದಾಶಿವ, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಮತ್ತಿತರರು ಉಪಸ್ಥಿತರಿದ್ದರು.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…