ಮಂಗಳೂರು

ಬೆಳುವಾಯಿ: ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ

ಮೂಡುಬಿದಿರೆ: ಬೆಳುವಾಯಿ ಗ್ರಾಪಂ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ರೂ.7.5 ಕೋ.ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ರೂ.13 ಕೋ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಮಂಗಳವಾರ ಶಿಲಾನ್ಯಾಸ ನೆರವೇರಿಸಿದರು.

ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷ – ಜಾತಿ ಬೇಧ ಮರೆತು ರೂ. 2000 ಕೋ.ರೂಗಳ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ಶಾಸಕನಾಗಿ ಆಯ್ಕೆಯಾದ ಮೊದಲ ಎರಡು ವರ್ಷ ಕೊರೋನಾದಿಂದ ಸ್ವಲ್ಪ ತೊಂದರೆಯಾಯಿತು. ಇಲ್ಲದಿದ್ದರೆ ರೂ. 5000 ಕೋ.ರೂಗಳ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಬಹುದಿತ್ತು. ಬೆಳುವಾಯಿ ಗ್ರಾಪಂ ವ್ಯಾಪ್ತಿಯಲ್ಲಿ ರೂ .100 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಇತ್ತೀಚೆಗೆ ತಾನು ಮಾತನಾಡಿದ ವೀಡಿಯೋ ತುಣುಕೊಂದನ್ನು ಹಿಡಿದು ತನ್ನ ತೇಜೋವಧೆ ಮಾಡುವ ಕೆಲಸ ವಿಘ್ನ ಸಂತೋಷಿಗಳಿಂದ ನಡೆಯುತ್ತಿದೆ. ಮುಸ್ಲಿಂರು ಮತ್ತು ಕ್ರಿಶ್ಚಿಯನ್ನರು ನಮಗೆ ಓಟು ಹಾಕುವುದಿಲ್ಲ ಎಂಬ ಭಾವನೆ ಬಿಜೆಪಿಗರಲ್ಲಿದ್ದರೆ, ಎರಡೂ ಸಮಾಜದವರು ನಮಗೆ ಓಟು ಹಾಕುತ್ತಾರೆಂಬ ಭಾವನೆ ಕಾಂಗ್ರೆಸಿಗರಲ್ಲಿದೆ ಎಂದು ನಾನು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದರು.

ಸನ್ಮಾನ: ಬೆಳುವಾಯಿವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ರೂ.100 ಕೋ.ಅನುದಾನವನ್ನು ಒದಗಿಸಿರುವುದಕ್ಕೆ 7ನೇ ವಾರ್ಡಿನ ಸದಸ್ಯ ಭರತ್ ಶೆಟ್ಟಿ ನೇತೃತ್ವದಲ್ಲಿ ಗ್ರಾಮಸ್ಥರು ಕೋಟ್ಯಾನ್ ಅವರನ್ನು ಸನ್ಮಾನಿಸಿದರು. 130 ಕುಟುಂಬಗಳಿಗೆ ಹಕ್ಕುಪತ್ರವನ್ನು ವಿತರಿಸಿರುವ ಫಲಾನುಭವಿಗಳು ಕೋಟ್ಯಾನ್ ಅವರಿಗೆ ಹೂವನ್ನು ನೀಡಿ ಗೌರವಿಸಿದರು.

ಬೆಳುವಾಯಿ ಗ್ರಾಪಂ ಅಧ್ಯಕ್ಷೆ ಸುಶೀಲಾ, ಉಪಾಧ್ಯಕ್ಷ ರವೀಂದ್ರ ಪೂಜಾರಿ, ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಶೆಟ್ಟಿಗಾರ್, ಕೇಶವ ಕರ್ಕೇರ,ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಭೂನ್ಯಾಯ ಮಂಡಳಿಯ ಸದಸ್ಯ ಹರ್ಷವರ್ಮ ಹೆಗ್ಡೆ ಮಾಲಾಡಿ, ವಿ.ಹಿಂ.ಪ ತಾಲೂಕು ಕಾರ್ಯಧ್ಯಕ್ಷ ಶ್ಯಾಮ ಹೆಗ್ಡೆ, ಕೆಸರ್‌ಗದ್ದೆ ಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಶೆಟ್ಟಿ, ಹೋಮಲ್ಕೆ ಶಕ್ತಿ ಕೇಂದ್ರದ ಅಧ್ಯಕ್ಷ ಸೂರಜ್ ಆಳ್ವ ಅತಿಥಿಗಳಾಗಿ ಭಾಗವಹಿಸಿದ್ದರು. ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.

ಬೆಳುವಾಯಿ ಗ್ರಾ.ಪಂ.ನ ಮಾಜಿ ಅಧ್ಯಕ್ಷ ಭಾಸ್ಕರ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸೋಮನಾಥ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.ಶಿವರಾಮ ಹೆಗ್ಡೆ ವಂದಿಸಿದರು.

Gayathri SG

Recent Posts

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

6 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

42 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago