Categories: ಮಂಗಳೂರು

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದ ಮೃತ್ಯುಂಜಯ ನದಿಯಲ್ಲಿ ಕಂಡು ಬಂದ ಒಂಟಿ ಸಲಗ

ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದ ಮೃತ್ಯುಂಜಯ ನದಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಸಂಜೆ ಮೂರು ಗಂಟೆ ಸುಮಾರಿಗೆ ಇಲ್ಲಿನ ಹೊಸಮಠ ಪ್ರದೇಶದಲ್ಲಿ ಒಂಟಿ ಸಲಗವೊಂದು ಜಲವಿಹಾರ ನಡೆಸುವ ದೃಶ್ಯ ಕಂಡು ಬಂದಿದೆ.

ಸುಮಾರು ಅರ್ಧ ತಾಸಿಗಿಂತ ಅಧಿಕ ಹೊತ್ತು ನೀರಿನಲ್ಲಿ ಆಟ ಆಡಿದ ಆನೆ ಬಳಿಕ ನದಿಯ ಕೆಳಭಾಗದತ್ತ ತೆರಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಾಡಾನೆ ಚಾರ್ಮಾಡಿಯಲ್ಲಿ ಕಂಡು ಬಂದ ದಿನ ತಡ ರಾತ್ರಿ ಮುಂಡಾಜೆಯ ದುಂಬೆಟ್ಟು ಪರಿಸರದಲ್ಲಿ ಸಂಚಾರ ನಡೆಸಿತ್ತು. ಇದು ಸ್ಥಳೀಯರ ಗಮನಕ್ಕೆ ಬಂದಿದ್ದು ತಕ್ಷಣ ಕಾಡಾನೆಯನ್ನು ಕಾಡಿನತ್ತ ಅಟ್ಟಲಾಗಿತ್ತು.

ಆನೆ ಜಲವಿಹಾರ ನಡೆಸಿರುವ ನದಿಯ ಒಂದು ಭಾಗದಲ್ಲಿ ಪವರ್ ಪ್ರಾಜೆಕ್ಟ್, ಕೋಕ್ಕೋ ಪ್ಲಾಂಟೇಶನ್ ಹಾಗೂ ಇನ್ನೊಂದು ಭಾಗದಲ್ಲಿ ಹೊಸಮಠ,ದೀವಾಜೆ,ಕೊರಂಗಾಯಿ ಮೊದಲಾದ ಜನವಸತಿ ಪ್ರದೇಶಗಳಿವೆ.

Sneha Gowda

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

6 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

48 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

51 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago