Categories: ಮಂಗಳೂರು

ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣು!

ಬೆಳ್ತಂಗಡಿ: ಇನ್‌ ಸ್ಟಾಗ್ರಾಂ ಖಾತೆಯ ಮೂಲಕ ಬಂದ ಬೆದರಿಕೆಗೆ ಹೆದರಿ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಜ.30ರಂದು ನಡೆದಿದೆ.

ಧರ್ಮಸ್ಥಳದ ಅಶೊಕ್ ನಗರದ ನಿವಾಸಿ, ಬೆಳ್ತಂಗಡಿಯ ಕಾಲೇಜೊಂದರಲ್ಲಿ 2 ನೇ ವರ್ಷದ ಪದವಿ ತರಗತಿ ವ್ಯಾಸಂಗ ಮಾಡುತ್ತಿದ್ದ. ಹರ್ಷಿತ್ (19)ಗೆ ಸುಮಾರು 15 ದಿನಗಳ ಹಿಂದೆ ಇನ್‌ ಸ್ಟಾಗ್ರಾಂ ಖಾತೆಯಲ್ಲಿ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು ಚಾಟಿಂಗ್ ಮಾಡಿ, ಮೊಬೈಲ್ ಗೆ ವಿಡಿಯೋ ಕಾಲ್ ಮಾಡಿ ಮಾತನಾಡಿ, ನಿನ್ನ ವೈಯಕ್ತಿಕ ವಿಡಿಯೋ ನನ್ನ ಬಳಿ ಇದ್ದು,ಇದನ್ನು ಸಾರ್ವಜನಿಕವಾಗಿ ವೈರಲ್ ಮಾಡುತ್ತೇನೆ, ವಿಡಿಯೋ ವೈರಲ್ ಮಾಡಬಾರದು ಎಂದಾದರೆ 11,000 ರೂ.ನೀಡಬೇಕೆಂದು ಬೇಡಿಕೆ ಇಟ್ಟಿದ್ದನು.

ಆತನ ಬೆದರಿಕೆಗೆ ಹೆದರಿದ ಯುವಕ, ಹಣ ನೀಡಲು ಜ.23ರ ವರೆಗೆ ಸಮಯ ಕೇಳಿದ್ದ.ಆದರೆ ಹರ್ಷಿತ್ ಗೆ ಜ.24 ಮಧ್ಯಾಹ್ನದ ವರೆಗೂ ಹಣ ಹೊಂದಿಸಲು ಸಾಧ್ಯವಾಗದೇ ಇದ್ದುದರಿಂದ ಮಧ್ಯಾಹ್ನದ ನಂತರ ಇಲಿ ಪಾಷಾಣವನ್ನು ಸೇವಿಸಿದ್ದಾನೆ.

ಬಳಿಕ ಅಸ್ವಸ್ಥಗೊಂಡ ಈತನನ್ನು ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದರು.

ಅಲ್ಲಿ ಆದರೆ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sneha Gowda

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

1 hour ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago