Categories: ಮಂಗಳೂರು

ಬೆಳ್ತಂಗಡಿ: ಅಭಿನಯ ಕಾರ್ಯಾಗಾರ ಸಮಾರಂಭ

ಬೆಳ್ತಂಗಡಿ: ಪ್ರಾಯೋಗಿಕ ಜ್ಞಾನವನ್ನು ಅನ್ವಯಿಸಿಕೊಳ್ಳುವ ಸಾಮಥ್ರ್ಯದೊಂದಿಗೆ ನಿರಂತರ ಕಲಿಕೆಯ ಶ್ರದ್ಧೆಯಿದ್ದರೆ ಕಲಾರಂಗದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡು ಸಾಧಿಸಲು ಸಾಧ್ಯವಾಗುತ್ತದೆ ಎಂದು ‘ಪಡ್ಡಾಯಿ’ ಸಿನಿಮಾ ಖ್ಯಾತಿಯ ನಟಿ ಬಿಂದುಶ್ರಿ ರಕ್ಷಿದಿ ಎ.ಯು ಹೇಳಿದರು.

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಸಿದ್ಧವನ ಗುರುಕುಲದಲ್ಲಿ ಎಸ್.ಡಿ.ಎಂ ಕಾಲೇಜಿನ ಬಿ.ವೋಕ್ ಡಿಜಿಟಲ್ ಮೀಡಿಯಾ – ಫಿಲ್ಮ್ ಮೇಕಿಂಗ್ ವಿಭಾಗವು ಆಯೋಜಿಸಿದ ಒಂದು ವಾರದ ‘ಅಭಿನಯ ಕಾರ್ಯಾಗಾರ’ದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು.

ಒಬ್ಬ ಕಲಾವಿದನಿಗೆ ಪ್ರಾಯೋಗಿಕ ಜ್ಞಾನ ಅತ್ಯಗತ್ಯ. ನಿರಂತರ ಪ್ರಯತ್ನ ಮತ್ತು ಸೂಕ್ಷ್ಮ ಗಮನ ನಟರನ್ನು ಗಟ್ಟಿಗೊಳಿಸುತ್ತದೆ. ಅಷ್ಟೇ ಅಲ್ಲ, ರಂಗಭೂಮಿ ಬದುಕಿನ ವಿವಿಧ ಮಜಲುಗಳನ್ನು ಯಶಸ್ವಿಯಾಗಿ ನಿಭಾಯಿಸುವ ಭರವಸೆ ಮೂಡಿಸುತ್ತದೆ. ಬಿಕ್ಕಟ್ಟಿನ ಸಂದರ್ಭಗಳಲ್ಲೂ ವಿಚಲಿತಗೊಳ್ಳದೇ ಮುನ್ನಡೆಯುವ ಶಕ್ತಿ ನೀಡುತ್ತದೆ ಎಂದರು.

ಸಿನಿಮಾ ಎಂದರೆ ಕೇವಲ ಅಭಿನಯ ಮಾತ್ರವಲ್ಲ. ವಿವಿಧ ರೀತಿಯ ಕಲಿಕೆಯ ಸಾಧ್ಯತೆಗಳು ಸಿನಿಮಾ ಮತ್ತು ರಂಗಭೂಮಿ ವಲಯಗಳಲ್ಲಿರುತ್ತವೆ. ಇಂಥ ಕಲಿಕೆಯ ಅವಕಾಶವನ್ನು ಅಭಿನಯ ಕಾರ್ಯಾಗಾರ ಒದಗಿಸಿಕೊಡುತ್ತದೆ ಎಂದು ಹವ್ಯಾಸಿ ಕಲಾವಿದ ಸುಬ್ರಹ್ಮಣ್ಯ ಜಿ.ಭಟ್ ಹೇಳಿದರು.ಕ್ರಿಯಾತ್ಮಕ ಜಗತ್ತಿನಲ್ಲಿ ಅತಿಯಾದ ಮಾತಿಗಿಂತ ಕೆಲಸಕ್ಕೇ ಹೆಚ್ಚಿನ ಆದ್ಯತೆ. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ಯಶಸ್ಸು ನಮ್ಮದಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿ.ವೋಕ್ ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ, ಕಾರ್ಯಗಾರ ಸಂಚಾಲಕಿ ಅಶ್ವಿನಿ ಜೈನ್, ನಟ ನವೀನ್ ಸಾಣೆಹಳ್ಳಿ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಮುರಾರಿ ವಂದಿಸಿ, ಗೌತಮ್ ಕಾರ್ಯಕ್ರಮ ನಿರೂಪಿಸಿದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

5 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

6 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

6 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

7 hours ago