News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಛೇರಿಗೆ ನಟಿ ಶೃತಿ ಭೇಟಿ

Belthangady: Actress Shruthi visits sri Dharmasthala Siri Gramodayog Sansthan's head office in Belthangady
Photo Credit : By Author

ಬೆಳ್ತಂಗಡಿ: ಚತುರ್ಭಾಷಾ ಚಲನಚಿತ್ರ ನಟಿ ಶ್ರೀಮತಿ ಶೃತಿಯವರು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಛೇರಿ ಉಜಿರೆಗೆ ನ.15 ರಂದು ಭೇಟಿ ನೀಡಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಕೆ.ಎನ್ ಜನಾರ್ಧನರವರು ಚಿತ್ರನಟಿ ಶೃತಿಯವರನ್ನು ಸ್ವಾಗತಿಸಿ, ಸಿರಿಸಂಸ್ಥೆಯ ಕಿರು ಪರಿಚಯವನ್ನು ಮಾಡಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.

ಶೃತಿಯವರು ಸನ್ಮಾನ ಸ್ವೀಕರಿಸಿ ಮಾತನಾಡಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಅಮ್ಮನವರ ಕನಸಿನ ಕೂಸಾಗಿರುವ ಈ ಸಿರಿ ಸಂಸ್ಥೆಯು ಇಲ್ಲಿ ದುಡಿಯುತ್ತಿರುವ ಪ್ರತಿಯೋರ್ವ ಮಹಿಳೆಗೂ ಸ್ವಾವಲಂಬನೆಯ ಬದುಕನ್ನು ನೀಡಿ, ಸುಖೀ ಜೀವನವನ್ನು ನಡೆಸಲು ಸ್ಪೂರ್ತಿಯಾಗಿದೆ.

ಪ್ರತೀ ಯಶಸ್ವೀ ಪುರುಷನ ಹಿಂದೆ ಓರ್ವ ಮಹಿಳೆ ಇದ್ದಾಳೆ ಎಂಬ ಗಾದೆ ಮಾತು ಇಲ್ಲಿ ಸುಳ್ಳಾಗಿದೆ. ಯಾಕೆಂದರೆ ಸಿರಿ ಸಂಸ್ಥೆಯಲ್ಲಿ ದುಡಿಯುತ್ತಾ, ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಂಡಂತಹ ಇಲ್ಲಿಯ ಎಲ್ಲಾ ಮಹಿಳೆಯರ ಹಿಂದೆ ಶಕ್ತಿಯಾಗಿ ಹೆಗ್ಗಡೆಯವರು ನಿಂತಿದ್ದಾರೆ. ಸಿರಿ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ಹೆಗ್ಗಡೆ ದಂಪತಿಗಳ ಆಸರೆಯಲ್ಲಿ ಸಹಸ್ರಾರು ಮಹಿಳೆಯರ ಬಾಳು ಬೆಳಕಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಿರಿ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾದ ರಾಜೇಶ್ ಪೈ, ‘ಕೊರಗಜ್ಜ’ ಚಲನಚಿತ್ರದ ನಿರ್ಮಾಪಕರಾದ ವಿಧ್ಯಾದರ್, ಸಿರಿ ಸಂಸ್ಥೆಯ ಆಡಳಿತ ಮತ್ತು ಲೆಕ್ಕಪತ್ರ ವಿಭಾಗದ ನಿರ್ದೇಶಕರಾದ ಪ್ರಸನ್ನ, ಎಸ್.ಕೆ.ಡಿ.ಆರ್.ಡಿ.ಪಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಹಾಗೂ ಸಿರಿ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಶೃತಿಯವರನ್ನು ಅಭಿನಂದಿಸಿ ಗೌರವಾರ್ಪಣೆ ಸಲ್ಲಿಸಿದರು. ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು