News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ನೀರಿನ ಸದ್ಬಳಕೆಯ ಬಗ್ಗೆ ವಸ್ತುಪ್ರದರ್ಶನ

An exhibition on the proper use of water
Photo Credit : News Kannada

ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಮತ್ತು ಸ್ವಚ್ಚಭಾರತ ಮಿಷನ್ ಯೋಜನೆಯ ಅಡಿಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ನ ವತಿಯಿಂದ ನೀರಿನ ಸದ್ಬಳಕೆಯ ಬಗ್ಗೆ ಧರ್ಮಸ್ಥಳದಲ್ಲಿ 3 ದಿನಗಳ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನೀರು ಅತ್ಯಂತ ಅಮೂಲ್ಯವಾಗಿದ್ದು ಅದನ್ನು ಮಿತವಾಗಿ ಬಳಕೆ ಮಾಡಬೇಕು ನೀರಿನ ಅತಿಯಾದ ಬಳಕೆಯಿಂದಾಗಿ ನೀರಿಗೆ ಅಭಾವವುಂಟಾಗುತ್ತಿದೆ. ಈ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸುವ ಅಗತ್ಯವಿದೆ. ಜಲಜೀವನ್ ಮಿಷನ್ ಯೋಜನೆ ಎಲ್ಲರಿಗೂ ಶುದ್ದ ನೀರನ್ನು ಒದಗಿಸುವ ಯೋಜನೆಯಾಗಿದ್ದು ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷರಾದ ಜಯಾ ಮೋನಪ್ಪ ಗೌಡ ಅವರು ವಹಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅಭಿವೃದ್ಧಿ ಅಧಿಕಾರಿ ಉಮೇಶ್, ರುಡ್ ಸೆಟ್ ಸಂಸ್ಥೆಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ , ಸ್ಥಳೀಯ ಗ್ರಾ.ಪಂ ಸದಸ್ಯರುಗಳು, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗ್ರಾ.ಪಂ ಸಿಬ್ಬಂದಿ ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಧನಂಜಯ ಸ್ವಾಗತಿಸಿದರು. ಗ್ರಾಮಸ್ಥರು ಉಪಸ್ಥಿತರಿದ್ದರು. ಧರ್ಮಸ್ಥಳ ಗೇಟಿನ ಸಮೀಪ ವಸ್ತುಪ್ರದರ್ಶನ ಹಾಗೂ ಮಾಹಿತಿ ಕೇಂದ್ರವನ್ನು ತೆರೆಯಲಾಗಿದ್ದು ಜೂನ್ 22ರ ವರೆಗೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು