ಬೆಳ್ತಂಗಡಿ: ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜ್ ನಲ್ಲಿ ಡಿ.8ರಿಂದ 10ರ ವರೆಗೆ ನಡೆದ ಪದವಿ ಪೂರ್ವ ವಿಭಾಗದ ರಾಜ್ಯಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿಗಳಾದ ಅಶ್ವಿನಿ ಹಾಗೂ ರಕ್ಷಿತಾ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ತರಬೇತಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ. ಎಸ್. ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಂದೀಪ್ ಶೆಟ್ಟಿ ನೀಡಿರುತ್ತಾರೆ.