ಮಂಗಳೂರು

ಬೆಳ್ತಂಗಡಿ: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಯಾಗಿ ಆದಿತ್ಯ ನಾರಾಯಣ್‌ ಸ್ಪರ್ಧೆ

ಬೆಳ್ತಂಗಡಿ: ಸರ್ವೋದಯ ಕರ್ನಾಟಕ ಪಕ್ಷದಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ರೈತ ಸಂಘದ ಯುವ ನಾಯಕ ಆದಿತ್ಯ ನಾರಾಯಣ ಕೊಲ್ಲಾಜೆಯವರು ಸ್ಪರ್ಧೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್ ಪುಣಚ ಹೇಳಿದರು. ಅವರು ಫೆ.10 ರಂದು ಅಂಬೇಡ್ಕರ್ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಜನಸಾಮಾನ್ಯರಿಗೆ ಸಹಾಯ ಮಾಡುವ ದೃಷ್ಟಿಯೊಂದಿಗೆ ರಾಜಕೀಯಕ್ಕೆ ಪುವೇಶಿಸಿ ಪಕ್ಷವನ್ನು ಶ್ರೀಸಾಮಾನ್ಯನ ಅಭಿವೃದ್ಧಿಗಾಗಿ ಕಟ್ಟಲಾಗಿದೆ.
ಈಗಾಗಲೇ 3 ಶಾಸಕರ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪಕ್ಷವು ರೈತ ಸಂಘ ಮತ್ತು ಡಿಎಸ್‌ಎಸ್‌ಗಳ ಬಲವಾದ ಬೆಂಬಲದೊಂದಿಗೆ ಮತ್ತೆ ರಾಜಕೀಯಕ್ಕೆ ಪುವೇಶಿಸುತ್ತಿದೆ. ಸರ್ವೋದಯ ಕರ್ನಾಟಕ ಪಕ್ಷ ಈಗಾಗಲೇ ಬೆಳ್ತಂಗಡಿ, ಮೇಲುಕೋಟೆ, ಮಂಡ್ಯ ವಿರಾಜಪೇಟೆ, ಬೀಳಗಿ ಸೇರಿದಂತೆ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ಮಾತನಾಡಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಆಗಿರುವ ವಿವಿಧ ಸಂಕಷ್ಟದ ಕುರಿತು ಸರಕಾರದ ವಿರುದ್ಧ ಫೆ.16 ರಂದು ಬೆಂಗಳೂರು ಪ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ರೈತರ ಹಾಕ್ಕೋತ್ತಾಯ ಗಳಿಗಾಗಿ ಬ್ರಹತ್ ಪ್ರತಿಭಟನೆ ನಡೆಯಲಿದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಮಾತನಾಡಿ ಫೆ.13 ರಂದು ಮಂಡ್ಯ ದಲ್ಲಿ ವಿಶ್ವ ರೈತ ಚೇತನ ಪ್ರೊ. ಎಂ. ಡಿ. ನಂಜುಂಡ ಸ್ವಾಮಿರವರ ನೆನಪಿನ ದಿನಾಚರಣೆ ಮತ್ತು ರಸ್ತೆ ಹಾಗು ವೃತ್ತಕ್ಕೆ ನಾಮಕರಣ, ಯುವ ರೈತ ಘಟಕದ ಚಾಲನಾ ಸಮಾರಂಭ ನಡೆಯಲಿದೆ ಎಂದರು.

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಜಿಲ್ಲಾ ರೈತ ಯುವ ಘಟಕದ ಅಧ್ಯಕ್ಷ ಆದಿತ್ಯ ನಾರಾಯಣ ಕೊಲ್ಲಾಜೆ ಮಾತನಾಡಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು, ಮಹಿಳಾ ಸಭಲಿಕರಣ, ಜನ ಸಾಮಾನ್ಯರ ತೆರಿಗೆ ಹಣ ನಿಜವಾದ ಕಾರ್ಯಕ್ರಮಕ್ಕೆ ವಿನಿಯೋಗ ಮಾಡಲು, ಕಟ್ಟಡ ಕಾರ್ಮಿಕರಿಗೆ ಪಿಂಚಣಿ ಯೋಜನೆ, ಉದ್ಯೋಗ ಸೃಷ್ಟಿ ಮೊದಲಾದ ಉತ್ತಮ ಕೆಲಸ ನಿರ್ವಹಿಸಲು ಸ್ಪರ್ಧಿಸುತ್ತೇನೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಯುವ ಘಟಕದ ಗೌರವ ಅಧ್ಯಕ್ಷ ಸುರೇಂದ್ರ ಕೊರ್ಯ, ಇತರ ರೈತ ಸಂಘದ ಸದಸ್ಯರು ಉಪಸ್ಥಿತರಿದ್ದರು.

Ashika S

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

34 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

41 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

52 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago