Categories: ಮಂಗಳೂರು

ಬೆಳ್ತಂಗಡಿ: ಬೆಳಾಲು ಪ್ರೌಢಶಾಲೆಯಲ್ಲಿ ಬಾರಿಸು ಕನ್ನಡ ಡಿಂಡಿಮ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ , ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಶ್ರೀ ಧ .ಮ .ಪ್ರೌಢಶಾಲೆಯ ವತಿಯಿಂದ, ಬೆಳಾಲು ಗ್ರಾಮದ ಪ್ರೌಢಶಾಲೆ ಮತ್ತು ಎಲ್ಲ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗಾಗಿ “ಬಾರಿಸು ಕನ್ನಡ ಡಿಂಡಿಮ” ಕನ್ನಡ ಗೀತೆಗಳ ಗಾಯನ ಮತ್ತು ಕಥೆ – ಕವನ ಕಟ್ಟುವುದರ ಕುರಿತು ತರಬೇತಿ ಕಾರ್ಯಕ್ರಮ ಜರಗಿತು.

ಉದ್ಘಾಟಕರಾಗಿ ಆಗಮಿಸಿದ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ ಪಿ ಶ್ರೀ ನಾಥ್ ರವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಮಕ್ಕಳೆಡೆಗೆ ಸಾಹಿತ್ಯ ಪರಿಷತ್ತು ಎಂಬ ಆಶಯದಂತೆ ಇಂದಿನ ಕಾರ್ಯಕ್ರಮ ಜರಗುತ್ತಿದೆ. ಶಿಕ್ಷಣ ಸಂಸ್ಥೆಗಳು ಪಾಠದೊಂದಿಗೆ ಮಕ್ಕಳಿಗೆ ಸಹಪಠ್ಯ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಸೃಜನಶೀಲತೆಯನ್ನು ಪೋಷಿಸಬೇಕು. ಅದಕ್ಕಾಗಿ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಾಗಬೇಕು ಎಂದು ಆಶಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ ಯದುಪತಿ ಗೌಡರು ಮಾತನಾಡುತ್ತಾ, ಸಾಹಿತ್ಯಿಕ ಕಾರ್ಯಕ್ರಮಗಳ ಮೂಲಕ ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಳಿಸುವ ಕೆಲಸವಾಗುತ್ತದೆ. ಅದಕ್ಕಾಗಿ ಇಂತಹ ಶಿಬಿರಗಳಿಂದ ತರಬೇತಿ ಮತ್ತು ಪ್ರೆರಣೆಗಳು ಲಭ್ಯವಾಗುತ್ತದೆ ಎಂದು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಅತಿಥಿಗಳಾಗಿ ಬೆಳಾಲು ಪ್ರೌಢಶಾಲೆಯ ಪೋಷಕ ಸಮಿತಿಯ ಅಧ್ಯಕ್ಷರಾದ ಸುಲೈಮಾನ್ ಭೀಮಂಡೆ, ಮಾಯಾ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಗೌಡ ಸುರುಳಿ, ಕೊಲ್ಪಾಡಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಕುರ್ಕಿಲು, ಪೆರಿಯಡ್ಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ಮಡಿವಾಳ, ಸರಸ್ವತೀ ಶಾಲೆಯ ಪೋಷಕ ಸಮಿತಿಯ ಅಧ್ಯಕ್ಷರಾದ ಸತೀಶ್ ನಾಯ್ಕ್ ಸುರುಳಿ ಇವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಕೊಲ್ಪಾಡಿ ಶಾಲಾ ಶಿಕ್ಷಕರಾದ ಪರಮೇಶ್ವರ್ , ಕರಿಯಣ್ಣ ಬೇರಿಕೆ, ಸಾಹಿತ್ಯ ಪರಿಷತ್ತಿನ ಬೆಳಿಯಪ್ಪ ಕೆ ಬೆಳಾಲು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಶಿಕ್ಷಕರಾದ ಶಂಕರ್ ತಾಮ್ಹಣ್ಕರ್ ಮುಂಡಾಜೆ ಮತ್ತು ಉಜಿರೆ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಗೀತಾರವರು ಆಗಮಿಸಿ ತರಬೇತಿಯನ್ನು ನಡೆಸಿಕೊಟ್ಟರು.

ಶಾಲಾ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕರಾದ ಗಣೇಶ್ವರ್ ವಂದಿಸಿದರು. ಕಾರ್ಯಕ್ರಮದ ಸಂಯೋಜಕರಾದ ಶಿಕ್ಷಕ ಸುಮನ್ ಯು ಎಸ್ ರವರು ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕ ಸಿಬ್ಬಂದಿಯವರು ಉಪಸ್ಥಿತರಿದ್ದು ತರಬೇತಿಯನ್ನು ಯಶಸ್ವಿಗೊಳಿಸಿದರು.

Sushma K

Recent Posts

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

4 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

12 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

18 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

32 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

49 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

1 hour ago