Categories: ಮಂಗಳೂರು

ಬೆಳ್ತಂಗಡಿ: ರಕ್ತದಾನ ಜೀವ ಉಳಿಸುವ ಪುಣ್ಯ ಕಾರ್ಯ ಎಂದ ಕೆ.ವಸಂತ ಬಂಗೇರ

ಬೆಳ್ತಂಗಡಿ : ‘ ರಕ್ತದಾನ ಜೀವ ಉಳಿಸುವ ಬದುಕಿನ ಪುಣ್ಯದ ಕಾರ್ಯ.ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವ ಶ್ರೇಷ್ಠ ಕಾರ್ಯವನ್ನು ಮಾಡಬೇಕು’ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು.

ಅವರು ತನ್ನ 78 ನೇ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಘ (ರಿ) ಮಂಗಳೂರು, ರೆಡ್ ಸೊಸೈಟಿ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ನಡೆಸಿದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಈ ಪ್ರಕೃತಿಯಲ್ಲಿ ಕೃತಕವಾಗಿ ತಯಾರು ಮಾಡಲು ಅಸಾಧ್ಯವಾದುದು ರಕ್ತ. ವ್ಯಕ್ತಿಯೊಬ್ಬರಿಗೆ ರಕ್ತದಾನ ಮಾಡುವುದು ನಮ್ಮ ಜೀವದಾನ ಮಾಡುವುದಕ್ಕೆ ಸಮಾನ. ನಮ್ಮಿಂದ ಆಸ್ತಿ ಸಂಪತ್ತು ದಾನ ಮಾಡಲು ಅಸಾಧ್ಯವಾದರೂ ರಕ್ತದಾನ ಮಾಡುವ ಸಂಕಲ್ಪವನ್ನು ಪ್ರತಿಯೊಬ್ಬರೂ ತನ್ನ ಬದುಕಿನ ಉದ್ದಕ್ಕೂ ಇಟ್ಟುಕೊಳ್ಳಬೇಕು’ ಎಂದರು.

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಸ್ವತಃ ರಕ್ತದಾನ ಮಾಡಿ ಮಾತನಾಡಿ,’ ವಸಂತ ಬಂಗೇರರು ಸಮಸ್ತ ಸಮಾಜದ ಆಸ್ತಿಯಾಗಿದ್ದಾರೆ. ಅವರು ಎಲ್ಲರಿಗೂ ಪ್ರೇರಣಾದಾಯಕ ವ್ಯಕ್ತಿತ್ವ ಬೆಳೆಸಿಕೊಂಡವರು. ಅವರ ಅಭಿಮಾನಿಗಳು ರಕ್ತದಾನ ಶಿಬಿರದ ಮೂಲಕ ಅವರ ಹುಟ್ಟು ಹಬ್ಬವನ್ನು ಆಚರಿಸುತ್ತಿರುವುದು ಮಾದರಿ ಕಾರ್ಯ’ ಎಂದರು.

ರೆಡ್ ಕ್ರಾಸ್ ಸಂಸ್ಥೆಯ ಬೆಳ್ತಂಗಡಿ ಘಟಕದ ಅಧ್ಯಕ್ಷ ಶಿವಕುಮಾರ್ ಎಸ್.ಎಂ. ಮಾತನಾಡಿ, ‘ ವಸಂತ ಬಂಗೇರ ತಾಲ್ಲೂಕಿನ ಅಪರೂಪದ ರಾಜಕಾರಣಿ. ಸೋತರೂ ಗೆದ್ದರೂ ಜನರ ಮಧ್ಯೆ ಇದ್ದು ಜನರ ಸಮಸ್ಯೆಗೆ ಸ್ಪಂದಿಸುವವರು. ಅವರ ಹುಟ್ಟು ಹಬ್ಬದ ದಿನ ಅವರ ಅಭಿಮಾನಿಗಳು ಹಮ್ಮಿಕೊಂಡಿರುವ ರಕ್ತದಾನ ಕಾರ್ಯ ಸಾರ್ಥಕ ಕಾರ್ಯ’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಹುಲ್ ಹಮೀದ್, ವಕೀಲ ಮನೋಹರ್ ಕುಮಾರ್, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಶುಭ ಹಾರೈಸಿದರು. ವೇದಿಕೆಯಲ್ಲಿ ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಯಶವಂತ ಪಟವರ್ಧನ್, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಇದ್ದರು.

ಶ್ರೀ ಗುರುದೇವ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಕೆ. ವಸಂತ ಬಂಗೇರ ರನ್ನು ಗೌರವಿಸಲಾಯಿತು.

ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಸದಸ್ಯರಾದ ಶಿವಕುಮಾರ್ ಎಸ್.ಎಂ ಸ್ವಾಗತಿಸಿದರು. ಆಶಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಸಮೀವುಲ್ಲಾ ವಂದಿಸಿದರು.

ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಪಾಲಿಸುತ್ತಾ ಬಂದವರು ಕೆ. ವಸಂತ ಬಂಗೇರರು. ಶಿಕ್ಷಣ ಮತ್ತು ಸಂಘಟನೆಗೆ ಹೆಚ್ಚು ಒತ್ತು ಕೊಟ್ಟವರು. ಅವರು ಆರಂಭಿಸಿದ ಶ್ರೀ ಗುರುದೇವ ವಿದ್ಯಾ ಸಂಸ್ಥೆ ಕರಾವಳಿ ಭಾಗದ ಶ್ರೇಷ್ಠ ಸಂಸ್ಥೆಯಾಗಿ ಬೆಳೆಯುವುದರಲ್ಲಿ ಅನುಮಾನವಿಲ್ಲ ಎಂದು ರಕ್ಷಿತ್ ಶಿವರಾಂ ಹೇಳಿದರು.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

40 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

53 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago