Categories: ಮಂಗಳೂರು

ಬೆಳ್ತಂಗಡಿ: ಹೆದ್ದಾರಿಗಳ ತುರ್ತು ದುರಸ್ತಿಗೆ 1ಕೋ ರೂ, ಡಾ.ಹೆಗ್ಗಡೆಯವರ ಮನವಿಗೆ ಸಿಎಂ ಸ್ಪಂದನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.19ರಿಂದ 24ರ ತನಕ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಭಕ್ತರ ಅನುಕೂಲಕ್ಕೆ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸರಿಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪತ್ರ ಮುಖೇನ ಮನವಿ ಮಾಡಿದ್ದಾರೆ.

ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 73 ಗುರುವಾಯನಕೆರೆಯಿಂದ ಉಜಿರೆ ತನಕದ ರಸ್ತೆ ಹಾಗೂ ಕೇಂದ್ರ ಸರ್ಕಾರದಿಂದ ಸ್ಪರ್ ರಸ್ತೆಯಾಗಿ ಘೋಷಣೆಯಾಗಿರುವ ಪೆರಿಯಶಾಂತಿಯಿಂದ ಧರ್ಮಸ್ಥಳವರೆಗಿನ ರಸ್ತೆ ತೀರಾ ಹದಗೆಟ್ಟಿದ್ದು, ಇದರಲ್ಲಿ ವಾಹನ ಸಂಚಾರ ಕಷ್ಟವಾಗಿದೆ. ಈ ರಸ್ತೆ ಸರಿಪಡಿಸಲು ಒಂದು ಕೋಟಿ ರೂ. ರಾಷ್ಟ್ರೀಯ ಹೆದ್ದಾರಿಯ ಮಂಗಳೂರು ವಿಭಾಗಕ್ಕೆ ಬಿಡುಗಡೆ ಮಾಡುವಂತೆ ವಿನಂತಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸಿಎಂ, 1 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ.

Sneha Gowda

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

4 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

4 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

5 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

5 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

5 hours ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

6 hours ago