News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ಗಂಗಾಧರ ಗೌಡ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಡಿಕೆಶಿಗೆ ದೂರು

Complaint filed against DK Shivakumar to take disciplinary action against Gangadhar Gowda
Photo Credit : News Kannada

ಬೆಳ್ತಂಗಡಿ: ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭ ಕೆಪಿಸಿಸಿ ಉಪಾಧ್ಯಕ್ಷರಾದ ಗಂಗಾಧರ ಗೌಡ ಯಾವುದೇ ಪಕ್ಷದ ಹಾಗೂ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಬಗ್ಗೆ ಸಿಟ್ಟುಗೊಂಡ ಬೆಳ್ತಂಗಡಿ ನಿಷ್ಠಾವಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗಂಗಾಧರ ಗೌಡರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ 18 ಪುಟಗಳ ಸಹಿ ಹಾಗೂ ಕೆಲ ದಾಖಲೆಗಳ ಜೊತೆ ದೂರು ಪತ್ರವನ್ನು ನೀಡಿದ್ದಾರೆ.

ಕರ್ನಾಟಕ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಗಂಗಾಧರ ಗೌಡ ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದ ಚುನಾವಣಾ ಫಲಿತಾಂಶ ದಿನಾಂಕದವರೆಗೆ ಪಕ್ಷದ ಪ್ರಮುಖ ಸ್ಥಾನದಲ್ಲಿ ಇದ್ದುಕೊಂಡು ಪಕ್ಷದ ಯಾವುದೇ ಸಭೆ ಸಮಾರಂಭದಲ್ಲಿ ಹಾಗೂ ಉಜಿರೆಯಲ್ಲಿ ಕೆಪಿಸಿಸಿ ಅಧ್ಯಕ್ಷರು ಭಾಗವಹಿಸಿದ ಪ್ರಚಾರ ಸಭೆಯಲ್ಲಿಯು ಭಾಗವಹಿಸಿರುವುದಿಲ್ಲ. ಮತ್ತು ತಮ್ಮ ಆಪ್ತರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಡಿ ಎಂದು ಹೇಳಿದ ಬಗ್ಗೆ ದಾಖಲೆಗಳು ಕೂಡ ಇವೆ. ಹಾಗಾಗಿ ಶೀಘ್ರವಾಗಿ ಪಕ್ಷಕ್ಕೆ ದ್ರೋಹ ಮಾಡಿದ ವ್ಯಕ್ತಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮರ್ ಅವರಿಗೆ ದೂರು ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು