ಬೆಳ್ತಂಗಡಿ: 2023 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿಯ ಕಾಂಗ್ರೇಸ್ ಮುಖಂಡರುಗಳು ಸಿದ್ಧತೆ ನಡೆಸಿದ್ದಾರೆ ಎಂಬುದು ಗೊತ್ತಾಗಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಕೆ.ಗಂಗಾಧರ ಗೌಡ, ಮಾಜಿ ಶಾಸಕ ವಸಂತ ಬಂಗೇರ ಹಾಗೂ ಯುವಕ, ವಕೀಲ ರಕ್ಷಿತ್ ಶಿವರಾಂ ಈ ಮೂವರು ಟಿಕೆಟ್ಗಾಗಿ ಬೆಂಗಳೂರಿಗೆ ತೆರಳಿ ಅರ್ಜಿ ಸಲ್ಲಿಸಿರುವುದು ಗೊತ್ತಾಗಿದೆ.
ಅರ್ಜಿ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ರಕ್ಷಿತ್ ಅವರು ಸೋಮವಾರ ಅರ್ಜಿ ಸಲ್ಲಿಸಿದ್ದರೆ, ಗೌಡ ಮತ್ತು ಬಂಗೇರ ಅವರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೇಸ್ ಪಕ್ಷವು ಆಕಾಂಕ್ಷಿಗಳಿಗೆ ಅರ್ಜಿಯೊಂದಿಗೆ ರೂ.5000 ಶುಲ್ಕ ಹಾಗೂ ರೂ. 2 ಲಕ್ಷದ ಡಿ.ಡಿ.ಯನ್ನು ಸಲ್ಲಿಸಬೇಕು ಎಂಬ ಷರತ್ತನ್ನು ವಿಧಿಸಿದೆ.
ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸಲು ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ, ಅನುಭವಿ ರಾಜಕಾರಣಿಗಳಿಗಾ ಅಥವಾ ಹೊಸ ಮುಖಕ್ಕೆ ಆದ್ಯತೆ ನೀಡಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ.