Categories: ಮಂಗಳೂರು

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ಮುಖಂಡರುಗಳ ಸಿದ್ಧತೆ!

ಬೆಳ್ತಂಗಡಿ: 2023 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬೆಳ್ತಂಗಡಿಯ ಕಾಂಗ್ರೇಸ್ ಮುಖಂಡರುಗಳು ಸಿದ್ಧತೆ ನಡೆಸಿದ್ದಾರೆ ಎಂಬುದು ಗೊತ್ತಾಗಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಕೆ.ಗಂಗಾಧರ ಗೌಡ, ಮಾಜಿ ಶಾಸಕ ವಸಂತ ಬಂಗೇರ ಹಾಗೂ ಯುವಕ, ವಕೀಲ ರಕ್ಷಿತ್ ಶಿವರಾಂ ಈ ಮೂವರು ಟಿಕೆಟ್‌ಗಾಗಿ ಬೆಂಗಳೂರಿಗೆ ತೆರಳಿ ಅರ್ಜಿ ಸಲ್ಲಿಸಿರುವುದು ಗೊತ್ತಾಗಿದೆ.

ಅರ್ಜಿ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ರಕ್ಷಿತ್ ಅವರು ಸೋಮವಾರ ಅರ್ಜಿ ಸಲ್ಲಿಸಿದ್ದರೆ, ಗೌಡ ಮತ್ತು ಬಂಗೇರ ಅವರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೇಸ್ ಪಕ್ಷವು ಆಕಾಂಕ್ಷಿಗಳಿಗೆ ಅರ್ಜಿಯೊಂದಿಗೆ ರೂ.5000 ಶುಲ್ಕ ಹಾಗೂ ರೂ. 2 ಲಕ್ಷದ ಡಿ.ಡಿ.ಯನ್ನು ಸಲ್ಲಿಸಬೇಕು ಎಂಬ ಷರತ್ತನ್ನು ವಿಧಿಸಿದೆ.

ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸಲು ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ, ಅನುಭವಿ ರಾಜಕಾರಣಿಗಳಿಗಾ ಅಥವಾ ಹೊಸ ಮುಖಕ್ಕೆ ಆದ್ಯತೆ ನೀಡಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ.

Sneha Gowda

Recent Posts

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

6 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

20 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

42 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

2 hours ago