ಮಂಗಳೂರು

ಬೆಳ್ತಂಗಡಿ: ಡಿ. 4 ರಂದು ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

ಬೆಳ್ತಂಗಡಿ: ‘ಜಿಲ್ಲೆಯ ಇತಿಹಾಸ ಪ್ರಸಿದ್ಧ ವೇಣೂರು ಪೆರ್ಮುಡ ಹೊನಲು ಬೆಳಕಿನ 30 ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ ಡಿ. 3 ರಂದು ಉದ್ಘಾಟನೆಯಾಗಲಿದ್ದು ಡಿ. 4 ರಂದು ಮಾಜಿ ಮುಖ್ಯಮಂತ್ರಿ ವಿಧಾನ ಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಂಬಳ ಕೂಟದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದಾರೆ’ ಎಂದು ಕಂಬಳ ಸಮಿತಿಯ ಕಾರ್ಯಧ್ಯಕ್ಷ ಶೇಖರ ಕುಕ್ಕೆಡಿ ಹೇಳಿದರು.

ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷ ವಿಶೇಷವಾಗಿ 30ನೇ ವರ್ಷದ ಕಂಬಳವಾಗಿದ್ದು ಕಂಬಳದ ಎಲ್ಲಾ ಪೂರ್ವ ತಯಾರಿ ಸಂಪೂರ್ಣ ಮುಗಿದಿರುತ್ತದೆ. ನಿಗದಿಯಂತೆ 24 ಗಂಟೆಯೊಳಗೆ ಮುಗಿಸಲು ಎಲ್ಲಾ ಸಿದ್ಧತೆಗಳನ್ನು, ಅದಕ್ಕೆ ಬೇಕಾದ ವಿವಿಧ ಸಮಿತಿಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ’ ಎಂದರು.

ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್ ಮಾತನಾಡಿ, ಕಂಬಳವನ್ನು ಡಿ.3 ರಂದು ಬೆಳಿಗ್ಗೆ 8.30 ಕ್ಕೆ ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ. ಪದ್ಮ ಪ್ರಸಾದ್ ಅಜಿಲರು ಉದ್ಘಾಟಿಸಲಿದ್ದಾರೆ. ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯನ್. ಪುರುಷೋತ್ತಮ ರಾವ್ ಅಧ್ಯಕ್ಷತೆ ವಹಿಸಲಿದ್ದು, ತಹಶೀಲ್ದಾರ್ ಪೃಥ್ವಿ ಸಾನಿಕಂ, ವೃತ್ತ ನಿರೀಕ್ಷಕ ಶಿವಕುಮಾರ್ ಬಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಗೌರವ ಅಧ್ಯಕ್ಷ, ಮಾಜಿ ಶಾಸಕ ವಸಂತ ಬಂಗೇರ ವಹಿಸಲಿದ್ದಾರೆ, ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನೀಲ್ ಕುಮಾರ್ , ಸಂಸದ ನಳಿನ್ ಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ಉಪ ನಾಯಕ ಬಿ.ಕೆ.ಹರಿಪ್ರಸಾದ್, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜಾ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.

‘ಕಂಬಳದಲ್ಲಿ ಕನೆ ಹಲಗೆ, ಹಗ್ಗ ಕಿರಿಯ, ಹಗ್ಗ ಹಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಹೀಗೆ ಒಟ್ಟು 6 ವಿಭಾಗದಲ್ಲಿ ಕೋಣಗಳ ಓಟದ ಸ್ಪರ್ಧೆಯು ನಡೆಯಲಿದೆ. ಈ ಹಿಂದೆ ಇದ್ದಂತೆ ಜಾಗದ ತಕರಾರು ಇಲ್ಲವಾಗಿದ್ದು, ಒಟ್ಟು 200 ಕ್ಕಿಂತ ಅಧಿಕ ಜೋಡಿ ಎತ್ತುಗಳು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷ ಸ್ಟಿವನ್ ಮೋನಿಸ್, ಸಲಹೆಗಾರ ಪದ್ಮನಾಭ ಸಾಲಿಯಾನ್ ಮಾಲಾಡಿ, ಸದಸ್ಯರಾದ ದಯಾನಂದ ದೇವಾಡಿಗ, ಜಯಂತ ಕೋಟ್ಯಾನ್ ಇದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago