News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ರೋಹಿತ್ ಚಕ್ರತೀರ್ಥ ವೇಣೂರಿಗೆ ಬಂದರೆ ದಲಿತ ಸಂಘಟನೆಯಿಂದ ‘ಗೋ ಬ್ಯಾಕ್’ ಹೋರಾಟ

Dalit organisation launches 'go back' protest if Rohit Chakratheertha comes to Venoor
Photo Credit : By Author

ಬೆಳ್ತಂಗಡಿ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಹಿತ ದಾರ್ಶನಿಕರಿಗೆ ಅವಮಾನ ಮಾಡಿದ ವಿವಾದಿತ ವ್ಯಕ್ತಿ ರೋಹಿತ್ ಚಕ್ರತೀರ್ಥ ಅವರನ್ನು ಆಹ್ವಾನಿಸಿರುವುದು ಖಂಡನೀಯ. ಒಂದು ವೇಳೆ ನಮ್ಮ ವಿರೋಧವನ್ನು ಲೆಕ್ಕಿಸದೆ ಅವರು ಆಗಮಿಸಿದರೆ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ವತಿಯಿಂದ ಕಪ್ಪುಪಟ್ಟಿ ತೋರಿಸಿ‌ “ಗೋ ಬ್ಯಾಕ್” ಅಭಿಯಾನ ಕೈ ಗೊಳ್ಳಲಾಗುವುದು ಎಂದು ಡಿಎಸ್‌ಎಸ್ ಅಂಬೇಡ್ಕರ್ ವಾದ ತಾಲೂಕು ಸಂಚಾಲಕ ನೇಮಿರಾಜ್ ಕಿಲ್ಲೂರು ಮತ್ತು ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ಹೇಳಿದರು.
ಬೆಳ್ತಂಗಡಿ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ನಡೆದ ಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ವೇಣೂರಿನ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ರೋಹಿತ್ ಚಕ್ರತೀರ್ಥರನ್ನು ಆಹ್ವಾನಿಸಿರುವುದು ಸರಿಯಲ್ಲ.

ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಹತ್ತನೇ ತರಗತಿ ಪಠ್ಯದಿಂದ ತೆಗೆದುಹಾಕಿದ ಪುಸ್ತಕ ಪರಿಷ್ಕರಣೆ ಸಮಿತಿಯ ಮುಖ್ಯಸ್ಥ ರೋಹಿತ್ ಚಕ್ರತೀರ್ಥರನ್ನು “ಶಿಕ್ಷಣ ಮತ್ತು ಧರ್ಮ” ಎನ್ನುವ ವಿಚಾರದಲ್ಲಿ ಉಪನ್ಯಾಸ ನೀಡಲು ಬ್ರಹ್ಮಕಲಶೋತ್ಸವ ಸಮಿತಿಯವರು ಕರೆದಿರುವುದು ಸರಿಯಲ್ಲ. ಇದಕ್ಕೆ ನಮ್ಮ ಸಂಘಟನೆಯ ವಿರೋಧವಿದೆ.

ಸಂವಿಧಾನ ಶಿಲ್ಪ ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ರಾಷ್ಟ್ರ ಕವಿ ಕುವೆಂಪು, ರಾಣಿ ಅಬ್ಬಕ್ಕ ಮತ್ತು ಕಯ್ಯಾರ ಕಿಂಞಣ್ಣ ರೈ ಮುಂತಾದ ದಾರ್ಶನಿಕರ ವ್ಯಕ್ತಿತ್ವಕ್ಕೆ ಕುಂದು ತರುವ ರೀತಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ನಡೆಸಿ ಕೊನೆಗೆ ಸರಕಾರದ ಆದೇಶದಂತೆ ಪಠ್ಯ ಮಸ್ತಕ ಪರಿಷ್ಕರಣಾ ಸಮಿತಿಯಿಂದ ಪದಚ್ಯುತಗೊಂಡು, ವಿಕೃತ ವಿಚಾರಧಾರೆಗಳನ್ನು ಹೊಂದಿರುವ ರೋಹಿತ್ ಚಕ್ರತೀರ್ಥರನ್ನು ಬ್ರಹ್ಮ ಕಲಶೋತ್ಸವದ ಸಭಾ ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು ಎಂದು ಒಕ್ಕೊರಲ ಮನವಿಯನ್ನು ಬ್ರಹ್ಮ ಕಲಶೋತ್ಸವ ಸಮಿತಿಯ ವರಲ್ಲಿ ಮನವಿ ಮಾಡುತ್ತಿದ್ದೇವೆ ಎಂದರು.

ಪರಿಸ್ಥಿತಿ ಸರಿಯಾಗದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಬೃಹತ್‌ ಪ್ರತಿಭಟನೆ ಮೂಲಕ ಸಂಘ ಪರಿವಾರದ ನಿಜಬಣ್ಣವನ್ನು ಬಯಲು ಮಾಡಲಿದ್ದೇವೆ ಎಂದೂ ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿ ಡಿಎಸ್‌ಎಸ್ ಹೋಬಳಿ ಸಂಚಾಲಕ ವಿಜಯಕುಮಾರ್ ಉಜಿರೆ, ಸಂಘಟನಾ ಸಂಚಾಲಕರುಗಳಾದ ಜಯಾನಂದ ಕೊಯ್ಯೂರು ಮತ್ತು ನಾಗರಾಜ್ ಎಸ್ ಲಾಯಿಲ, ಕಾರ್ಯಕರ್ತ ಎಸ್ ಪ್ರಭಾಕರ್ ಶಾಂತಿಕೋಡಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು