Categories: ಮಂಗಳೂರು

ಬೆಳ್ತಂಗಡಿ: ಉಜಿರೆ ಶ್ರೀ ರತ್ನವರ್ಮಹೆಗ್ಗಡೆ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ

ಬೆಳ್ತಂಗಡಿ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉಜಿರೆಯ ಶ್ರೀ ರತ್ನವರ್ಮಹೆಗ್ಗಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತು ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅವರು ನೆರವೇರಿಸಿ ಮಾತನಾಡುತ್ತಾ ಕ್ರೀಡಾ ಮನೋಭಾವನೆಯೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲಿ ಎಲ್ಲರೂ ಗೆಲುವನ್ನು ಪಡೆಯಲು ಸಾಧ್ಯವಿಲ್ಲ ಬಗವಹಿಸುವಿಕೆಯೇ ಮುಖ್ಯವಾಗಿದೆ ಎಂದರು.
ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಮುಖ್ಯ ಅತಿಥಿಯಾಗಿ ಆಗಮಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಕ್ರೀಡಾ ಕ್ಲಬ್ ಕಾರ್ಯದರ್ಶಿ ರಮೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ, ನಿಸರ್ಗ ಯುವಜನೇತರ ಮಂಡಲ ಬರಂಗಾಯ ಅಧ್ಯಕ್ಷ ಪುನೀತ್ ಪೊಂರ್ದಿಲ ಹಾಗೂ ಇತರರು ಇದ್ದರು.
ಯುವಜನ ಸಬಲೀಕರಣ ಇಲಾಖೆಯ ಮೇಲ್ವಿಚಾರಕ ಸಾಂತಪ್ಪ ಸ್ವಾಗತಿಸಿದರು, ಅಜಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು, ತರಬೇತುದಾರರಾದ ಸರಸ್ವತಿ ಪುತ್ರನ್ ವಂದಿಸಿದರು. ಕ್ರೀಡಾಕೂಟದಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

52 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago